Featured

ಬೆಳಗಾವಿ: ಕಾಂಗ್ರೆಸ್‌ ಸೇರ್ಪಡೆಯಾದ ಜೆಡಿಎಸ್‌ ನಾಯಕ ಕೋನರೆಡ್ಡಿ – Vishwanews24

ಬೆಳಗಾವಿ: ಕಾಂಗ್ರೆಸ್‌ ಸೇರ್ಪಡೆಯಾದ ಜೆಡಿಎಸ್‌ ನಾಯಕ ಕೋನರೆಡ್ಡಿ – Vishwanews24

ಬೆಳಗಾವಿ: ಧಾರವಾಡ ಜಿಲ್ಲೆಯ ಜಾತ್ಯತಿತ ಜನತಾ ದಳದ(ಜೆಡಿಎಸ್​) ಪ್ರಮುಖ ನಾಯಕರಾಗಿದ್ದ ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್​.ಎಚ್​. ಕೋನರೆಡ್ಡಿ ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರಿದ್ದಾರೆ.

ಬೆಳಗಾವಿಯ ಕಾಂಗ್ರೆಸ್​ ಭವನದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೋನರೆಡ್ಡಿ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾದರು.

ಜೆಡಿಎಸ್​ಗೆ ಈ ಭಾಗದಲ್ಲಿ ನೆಲೆ ಕುಸಿಯುತ್ತಿರುವುದರಿಂದ ಪಕ್ಷ ಬದಲಿಸುವ ಬಗ್ಗೆ ಕೆಲ ತಿಂಗಳ ಹಿಂದೆಯೇ ಕೋನರಡ್ಡಿ ಸುಳಿವು ನೀಡಿದ್ದರು. ಜೆಡಿಎಸ್​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ತಿಂಗಳ ಹಿಂದೆಯೇ ರಾಜೀನಾಮೆ ನೀಡಿದ್ದರು.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಕೋನರೆಡ್ಡಿ, ನನ್ನ ಕ್ಷೇತ್ರದ ಮತದಾರರ ಒತ್ತಾಯದ ಮೇರೆಗೆ ಕಾಂಗ್ರೆಸ್ ಸೇರಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನೂ ಕಾಲಾವಕಾಶ ಇದೆ. ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಬಿಡೋದು ಹಿರಿಯರಿಗೆ ಬಿಟ್ಟಿದ್ದು. ನನಗೆ ಜೆಡಿಎಸ್ ಸಾಕಷ್ಟು ಒಳ್ಳೆಯ ಸ್ಥಾನ ಮಾನ ನೀಡಿತ್ತು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಕಾರ್ಯದರ್ಶಿಯನ್ನಾಗಿ ಮಾಡಿಕೊಂಡಿದ್ರು. ನನಗೆ ಜೆಡಿಎಸ್​ನಿಂದ ಬೇಸರ ಆಗಿಲ್ಲ. ಕಾಂಗ್ರೆಸ್ ಪಕ್ಷದಿಂದ ನನಗೆ ಯಾವುದೇ ಆಮಿಷ ಇಲ್ಲ. ಈಗತಾನೆ ಕಾಂಗ್ರೆಸ್ ಸೇರಿದ್ದೇನೆ, ಮುಂದೆ ನೋಡೋಣ. ಸಿದ್ದರಾಮಯ್ಯ ಹಾಗೂ ಡಿಕೆಶಿ ಮೇಲೆ ನಂಬಿಕೆ ಇದೆ ಎಂದರು.

 

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

3 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

3 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

4 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

6 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

6 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago