ಬೆಳಗಾವಿ : ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ -Vishwanews24

Featured, ರಾಜ್ಯ ನ್ಯೂಸ್

ಬೆಳಗಾವಿ : ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ -Vishwanews24

ಬೆಳಗಾವಿ : ರೈತ ಮುಖಂಡ, ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತ ಮುಖಂಡರ ಹಾಗೂ ಸಾರಿಗೆ ನೌಕರರ ಜೊತೆಗೆ ಸಭೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂತಹ ಸಂದರ್ಭದಲ್ಲಿ ಸಾರಿಗೆ ನೌಕರರ ಹೋರಾಟ ಕುರಿತಂತೆ ಬೆಳಗಾವಿ ಖಾಸಗಿ ಹೋಟೆಲ್ ನಲ್ಲಿ ಇಂದು ರೈತ ಮುಖಂಡರು ಹಾಗೂ ಸಾರಿಗೆ ನೌಕರರ ಜೊತೆ ಸಭೆ ನಡೆಸಲು ಕೋಡಿಹಳ್ಳಿ ಚಂದ್ರಶೇಖರ್ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಸಭೆಗೂ ಮುನ್ನವೇ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವರಿಷ್ಠ ಮೋಹನ್ ಭಾಗವತ್ ಅವರಿಗೆ ಕೋವಿಡ್ ದೃಢ -Vishwanews24