ಬೆಳಗಾವಿ: ಕಳೆದ ಮಾರ್ಚ್ ತಿಂಗಳಲ್ಲಿ ಹರ್ಯಾಣದ ಸಮಾಲ್ಖಾದಲ್ಲಿ ಯಶಸ್ವಿಯಾಗಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಮುಖ ಸಭೆಯ ಬೆನ್ನಲ್ಲೇ, ಈ ಬಾರಿಯ ಪ್ರತಿಷ್ಠಿತ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಕುಂದಾನಗರಿ ಬೆಳಗಾವಿ ವೇದಿಕೆಯಾಗಲಿದೆ.
ಜುಲೈ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಈ ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ. ಈ ವಾರ್ಷಿಕ ಸಭೆಯಲ್ಲಿ ಸಂಘದ ವಿವಿಧ ಸ್ತರದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ:
ದೇಶವ್ಯಾಪಿಯ ಎಲ್ಲಾ ಪ್ರಾಂತ ಪ್ರಚಾರಕರು ಮತ್ತು ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ ಕ್ಷೇತ್ರ ಪ್ರಚಾರಕರು, ಸಂಘಟನಾ ವ್ಯವಸ್ಥೆಯ 11 ಕ್ಷೇತ್ರಗಳ ಪ್ರಮುಖ ಪ್ರಚಾರಕರು ಸೇರಿದಂತೆ ಒಟ್ಟು 46 ಪ್ರಾಂತಗಳ ಪ್ರಮುಖ ಕಾರ್ಯಕರ್ತರು., ಸಂಘ ಪ್ರೇರಿತ 32 ವಿವಿಧ ಸಂಘಟನೆಗಳ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.
ಆರ್‌ಎಸ್‌ಎಸ್‌ನ ಶತಮಾನೋತ್ಸವದ ಹಿನ್ನೆಲೆಯಲ್ಲಿ ಈ ಸಭೆ ಅತ್ಯಂತ ಪ್ರಾಮುಖ್ಯತೆ ಪಡೆದುಕೊಂಡಿದೆ. ಸಂಘದ ಶಾಖೆಗಳ ವಿಸ್ತರಣೆ ಮತ್ತು ಮುಂಬರುವ ದಿನಗಳ ದೇಶವ್ಯಾಪಿ ಕಾರ್ಯಯೋಜನೆಗಳ ಕುರಿತು ಈ ಸಭೆಯಲ್ಲಿ ಗಂಭೀರ ಹಾಗೂ ಮಹತ್ವದ ಚರ್ಚೆಗಳು ನಡೆಯಲಿವೆ.
ಇದನ್ನೂ ಓದಿ:
ಸಭೆಯ ನೇತೃತ್ವ ವಹಿಸಲು ಆರ್‌ಎಸ್‌ಎಸ್ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಜುಲೈ 6 ರಂದೇ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಇವರೊಂದಿಗೆ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಹಲವು ಪ್ರಮುಖ ರಾಷ್ಟ್ರೀಯ ನಾಯಕರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.
ಸರಸಂಘಚಾಲಕರ ಮುಂಚಿತ ಆಗಮನ ಹಾಗೂ ರಾಷ್ಟ್ರೀಯ ನಾಯಕರ ಉಪಸ್ಥಿತಿಯ ಹಿನ್ನೆಲೆಯಲ್ಲಿ, ಬೆಳಗಾವಿ ನಗರದಾದ್ಯಂತ ಯಾವುದೇ ಲೋಪದೋಷಗಳಾಗದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಅತ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…