Featured

ಬೆಳಗಾವಿ: ಬಾಣಂತಿಯರು, ಮಕ್ಕಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಬಾಣಂತಿಯರು, ಹಸುಗೂಸುಗಳ ಸಾವಿಗೆ ಇಂಥದ್ದೇ ಕಾರಣ ಎಂದು ಈ ಹಂತದಲ್ಲಿ ಹೇಳಲು ಸಾಧ್ಯವಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಸಂಭವಿಸಿದ ಬಾಣಂತಿಯರು, ಮಕ್ಕಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ಬಳ್ಳಾರಿ ಪ್ರಕರಣಗಳಿಗೂ, ಬ್ರಿಮ್ಸ್ ಗೂ ಸಂಬಂಧ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಬೆಳಗಾವಿಯಲ್ಲಿ ಇಂದು ಈ ಬಗ್ಗೆ ಮಾತನಾಡಿದ ಅವರು, ಪ್ರಕರಣ ಕುರಿತು ಈಗಾಗಲೇ ನಾನು ಅಧಿಕಾರಿಗಳ ಜೊತೆ ಮಾತನಾಡಿರುವೆ. ಎಲ್ಲವನ್ನೂ ಕೂಡ ಚರ್ಚೆ ಮಾಡಿದ್ದೇನೆ. ಯಾವ ಕಾರಣಕ್ಕೆ ಸಾವಿನ ಪ್ರಕರಣಗಳು ಸಂಭವಿಸಿವೆ, ಸಾವು ತಡೆಯಲು ಯಾವ ಕ್ರಮ ಕೈಗೊಳ್ಳಬೇಕು. ಏನೆಲ್ಲಾ ಮಾಡಬೇಕು ಅದನ್ನು ಮಾಡುತ್ತಿದ್ದೇವೆ ಹೇಳಿದರು.

ನಮ್ಮ ಜಿಲ್ಲೆಯಲ್ಲಿ 54 ಲಕ್ಷ ಜನಸಂಖ್ಯೆಯಿದೆ. ಹೀಗಾಗಿ ಅಂಕಿ ಅಂಶ ಹೆಚ್ಚಾಗಿ ಕಾಣುತ್ತಿದೆ. ಕಾರವಾರ ಸೇರಿದಂತೆ ಅನೇಕ ಕಡೆಗಳಿಂದ ಆಸ್ಪತ್ರೆಗೆ ಬೆಳಗಾವಿಗೆ ಬರುತ್ತಾರೆ. ಬಾಣಂತಿಯರು, ಹಸುಗೂಸುಗಳ ಸಾವಿಗೆ ಬಹಳಷ್ಟು ಕಾರಣಗಳಿವೆ. ಕಬ್ಬಿನಾಂಶ ಕೊರತೆ, ಪ್ರೀ ಮೆಚ್ಯುರ್ ಬೇಬಿ ಹೀಗೆ ಅನೇಕ ಕಾರಣಗಳಿವೆ. 1ಲಕ್ಷ ಮಕ್ಕಳು ಹುಟ್ಟಿದರೆ 28 ಮಕ್ಕಳು ಅದರಲ್ಲಿ ತೀರಿಕೊಳ್ಳುತ್ತಿದ್ದಾರೆ. ಇಡೀ ದೇಶಕ್ಕೆ 6ನೇ ಅತ್ಯುತ್ತಮ ಆಸ್ಪತ್ರೆ ಎಂದು ಬಿಮ್ಸ್ ಪಾತ್ರವಾಗಿದೆ. ಬಾಣಂತಿಯರು, ಹಸುಗೂಸುಗಳ ಸಾವಿಗೆ ಇಂಥದ್ದೇ ಕಾರಣ ಎಂದು ಈ ಹಂತದಲ್ಲಿ ಹೇಳಲು ಸಾಧ್ಯವಿಲ್ಲ ಎಂದರು.

Vishwa News 24

Recent Posts

ಬೆಂಗಳೂರು: ಯಾವುದೇ ಕಾರಣಕ್ಕೂ ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ – vishwanews24

ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…

21 minutes ago

ಬೆಳಗಾವಿ: ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ – vishwanews24

ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…

59 minutes ago

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

2 hours ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

2 hours ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

2 hours ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

3 hours ago