ಬೆಳಗಾವಿ : ಕರ್ನಾಟಕ ರಾಜ್ಯದ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮಳೆಗೆ ಹಳೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಆರು ಮಂದಿ ಮತ್ತು ಪಕ್ಕದ ಮನೆಯ ಬಾಲಕಿ ಸೇರಿ ಏಳು ಮಂದಿ ಮೃತಪಟ್ಟ ಘಟನೆ ನಿನ್ನೆ ನಡೆದಿತ್ತು. ಘಟನೆ ಸಂಬಂಧಿಸಿದಂತೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು 2ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ ಸತತ ಮೂರು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಹಳೆ ಗೋಡೆ ಒದ್ದೆ ಆಗಿತ್ತು. ಆ ಗೋಡೆ ಬೀಳುವುದನ್ನು ನೋಡಲು ಹೋಗಿದ್ದಾಗ ಈ ದುರಂತ ಸಂಭವಿಸಿತ್ತು. ಸುರೇಶ್ ಖಾನಗಾವಿ ಕುಟುಂಬದ ಲಕ್ಷ್ಮಿ ಅರ್ಜುನ್ ಖಾನಗಾವಿ(15), ಶಾಂತವ್ವ ಭೀಮಪ್ಪ ಖಾನಗಾವಿ(50), ಅರ್ಜುನ್ ಹನಮಂತ ಖಾನಗಾವಿ, ಸತ್ಯವ್ವ ಅರ್ಜುನ್ ಖಾನಗಾವಿ(45), ಪೂಜಾ ಅರ್ಜುನ್ ಖಾನಗಾವಿ(8), ಸವಿತಾ ಭೀಮಪ್ಪ ಖಾನಗಾವಿ(28) ಮತ್ತು ಪಕ್ಕದ ಮನೆಯ ಬಾಲಕಿ ಕಾಶವ್ವ ವಿಠ್ಠಲ ಕೊಳೆಪ್ಪನವರ(8) ಸಾವನ್ನಪ್ಪಿದ್ದರು. ಈ ಘಟನೆ ಬಗ್ಗೆ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿ 2 ಲಕ್ಷ ರೂ. ಪರಿಹಾರವನ್ನು ಮೋದಿ ಘೋಷಿಸಿದ್ದಾರೆ.
ಸುರೇಶ್ ಖಾನಗಾವಿ ಕುಟುಂಬ ತಮ್ಮ ಹಳೆಯ ಮನೆಯನ್ನು ಬೀಳಿಸಿ ಹೊಸ ಮನೆ ಕಟ್ಟುವ ಸಿದ್ಧತೆಯಲ್ಲಿದ್ದರು. ಅದಕ್ಕಾಗಿಯೇ ಪಕ್ಕದಲ್ಲಿ ಶೆಡ್ ನಿರ್ಮಿಸಿಕೊಂಡು ಅಲ್ಲೇ ವಾಸವಾಗಿದ್ದರು. ಗೋಡೆ ಕುಸಿಯುತ್ತಿದ್ದಂತೆ ಪ್ರಾಣ ರಕ್ಷಣೆಗೆ ಓಡಿದರೂ ಪ್ರಾಣ ಉಳಿಯಲಿಲ್ಲ. ಅಂಗಡಿಗೆ ಹೋಗಿದ್ದ ಮನೆಯ ಯಜಮಾನ ಸುರೇಶ್ ಖಾನಗಾವಿ ಮತ್ತು ಇನ್ನೊಬ್ಬ ಪುತ್ರ ಮಾತ್ರ ಬದುಕುಳಿದಿದ್ದಾರೆ.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಡಗರ ಸಂಭ್ರಮದ ಮಂಗಳೂರು ದಸರಾಗೆ ಸಂಭ್ರಮದ ಚಾಲನೆ -Vishwanews24
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…