ಬೆಳಗಾವಿ: ವಸತಿ ನಿವಾಸದಲ್ಲಿ ಅನಧಿಕೃತ ಮಸೀದಿ ನಿಮಾಣ ವಿವಾದಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಯು ನಗರದ ಫಾತೀಮಾ ಮಸೀದಿಗೆ ಬೀಗ ಹಾಕಿದೆ.
ಬೆಳಗಾವಿಯ ಸಾರಥಿ ನಗರದ ವಸತಿ ನಿವೇಶನದಲ್ಲಿ ಫಾತೀಮಾ ಮಸೀದಿಯನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಹಿಂದೂಪರ ಸಂಘಟನೆಗಳು, ಬಿಜೆಪಿ (BJP) ನಾಯಕರು ಸೇರಿ ಡಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯು ಫಾತಿಮಾ ಮಸೀದಿಯಲ್ಲಿ ಧಾರ್ಮಿಕ ಚಟುವಟಿಕೆ ನಿಲ್ಲಿಸುವಂತೆ ನೋಟಿಸ್ ನೀಡಿತ್ತು.
ಆದರೂ ಈ ನೋಟಿಸ್‌ಗೆ ಕ್ಯಾರೆ ಎನ್ನದ ಹಿನ್ನೆಲೆಯಲ್ಲಿ ಇದೀಗ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ ಅವರು, ವಕ್ಫ್ ಬೋರ್ಡ್‌ಗೆ ಕೂಡಲೇ ಮಸೀದಿಗೆ ಬೀಗ ಹಾಕುವಂತೆ ನೋಟಿಸ್ ನೀಡಿದ್ದಾರೆ. ಪಾಲಿಕೆ ಆಯುಕ್ತರು ನೋಟಿಸ್ ನೀಡುತ್ತಿದ್ದಂತೆ ವಕ್ಫ್ ಕಮಿಟಿಯವರು ಮಸೀದಿಗೆ ಬೀಗ ಹಾಕಿದ್ದಾರೆ. ಇನ್ನೂ ಮಸೀದಿ ಮುಂಭಾಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.
Join our Whatsapp group by clicking the below link 👇👇
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…