ನವದೆಹಲಿ: ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತಾಕೀತು ಮಾಡಿದೆ. ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳುಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ.
ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ ತೆರೆದಿರುತ್ತವೆ. ಆದರೆ ಕಿರಿಯ ಹಂತದ ಉದ್ಯೋಗಿಗಳು ತಡವಾಗಿ ಬರುವುದು ಮತ್ತು ಬೇಗನೆ ಹೊರಡುವುದು ಸಹಜವಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು ಸೇರಿದಂತೆ, ಜನರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ ಎಂದು ತಿಳಿಸಲಾಗಿದೆ.
ಕೊವೀಡ್ ಬಳಿಕ ಕೇಂದ್ರ ಸರ್ಕಾರದ ನೌಕರರು ಬಯೋಮೆಟ್ರಿಕ್ ಬಳಕೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಹಿರಿಯ ಅಧಿಕಾರಿಗಳು ಸಹಿತ ಎಲ್ಲರೂ ಬಯೋ ಮೆಟ್ರಿಕ್ ಮೂಲಕವೇ ಹಾಜರಾತಿ ದಾಖಲಿಸಬೇಕು ಎಂದು ಸೂಚಿಸಿದೆ. ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ವೇತನ ಕಡಿತಗೊಳಿಸಲಾಗುವುದು ಎಂದು ಸಹ ಎಚ್ಚರಿಕೆ ನೀಡಿದೆ.
ಅನಿವಾರ್ಯ ಕಾರಣಗಳಿಂದ ಯಾವುದೇ ಉದ್ಯೋಗಿಗೆ ನಿರ್ದಿಷ್ಟ ದಿನದಂದು ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಅದನ್ನು ಮುಂಚಿತವಾಗಿ ತಿಳಿಸಬೇಕು ಮತ್ತು ಸಾಂದರ್ಭಿಕ ರಜೆಗೆ ಅರ್ಜಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…