ಬೆಳಪುವಿನಲ್ಲಿ ಅತ್ಯಾಧುನಿಕ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ : ಪ್ರೀತಿ ಗೆಹ್ಲೋಟ್

ಬೆಳಪುವಿನಲ್ಲಿ ಅತ್ಯಾಧುನಿಕ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ :

ಉಡುಪಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಪ್ರೀತಿ ಗೆಹ್ಲೋಟ್

 

ಉಡುಪಿ : ಜಿಲ್ಲೆಯ ಬೆಳಪು ಗ್ರಾ.ಪಂ.ಗೆ ಭೇಟಿ ನೀಡಿ ತ್ಯಾಜ್ಯ ವಿಲೇವಾರಿ ಘಟಕದ ಯೋಜನಾ ಪ್ರದೇಶವನ್ನು ಪರಿಶೀಲಿಸಿದರು. ಪ್ಲಾಸ್ಟಿಕ್, ಘನ ಮತ್ತು ದ್ರವ ತ್ಯಾಜ್ಯವನ್ನು ಬೇರ್ಪಡಿಸುವ ವಿಧಾನ, ಕೋಳಿ ತ್ಯಾಜ್ಯಕ್ಕಾಗಿ ಪ್ರತ್ಯೇಕ ಘಟಕ ಮಾಡಿರುವುದನ್ನು ಗಮನಿಸಿ ಬೆಳಪುವಿನಲ್ಲಿ ರಾಜ್ಯಕ್ಕೆ ಮಾದರಿಯಾದ ಅತ್ಯಾಧುನಿಕ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಉಡುಪಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್‍ರವರು ತಿಳಿಸಿದರು.

ಬೆಳಪು ಗ್ರಾ.ಪಂ. ವ್ಯಾಪ್ತಿಯಲ್ಲಿ ಈಗಾಗಲೇ ಹಲವಾರು ಮಾದರಿ ಯೋಜನೆಗಳನ್ನು ಅನುಷ್ಟಾನ ಮಾಡಿರುವ ಬಗ್ಗೆ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿಯವರು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮಾಹಿತಿ ನೀಡಿ ಕೈಗಾರಿಕಾ ಪಾರ್ಕ್, ಅತ್ಯಾಧುನಿಕ ಸಂಶೋಧನಾ ಕೇಂದ್ರ, ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಪ್ರವಾಸೋದ್ಯಮಕ್ಕಾಗಿ ಕೆರೆ ಅಭಿವೃದ್ಧಿಗೊಳಿಸಿ ಬೋಟಿಂಗ್ ವ್ಯವಸ್ಥೆ, ಮೀನು ಸಾಕಾಣಿಕೆ ಯೋಜನೆ, 1 ಲಕ್ಷ ಸಸಿ ನೆಟ್ಟು ಹಸಿರು ವನ ನಿರ್ಮಾಣ, ಸುಮಾರು ವಸತಿ ರಹಿತರಿಗೆ ನಿವೇಶನ ಸಹಿತ ವಸತಿ ಬಡಾವಣೆ ನಿರ್ಮಾಣ, ಮಾದರಿಯಾದ ಹಿಂದೂ ರುದ್ರಭೂಮಿ ಬಗ್ಗೆ ಸಮಗ್ರವಾದ ಮಾಹಿತಿ ನೀಡಿದರು.

ಬೆಳಪು ಗ್ರಾಮದ ಮುಂದಿನ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಾಧುನಿಕವಾದ ಯೋಜನೆಯ ಮೂಲಕ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗಾಗಿ ಈಗಾಗಲೇ 3.00 ಎಕ್ರೆ ಜಾಗವನ್ನು ಮೀಸಲಿಡಲಾಗಿದೆ. ಕಸದಿಂದ ರಸ ಹಾಗೂ ರಾಸಾಯನಿಕ ಸಾವಯವ ಗೊಬ್ಬರ ಮಾಡುವ ಘಟಕವನ್ನು ಸ್ಥಾಪಿಸುವ ಉದ್ದೇಶದೊಂದಿಗೆ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಯೋಜನೆಯನ್ನು ರೂಪಿಸಬೇಕೆಂಬುದು ನಮ್ಮ ಆಶಯ. ಸುತ್ತ ಮುತ್ತಲಿನ ಗ್ರಾಮದ ತ್ಯಾಜ್ಯ ವಿಲೇವಾರಿಗೂ ಸೂಕ್ತವಾಗಿ ಸಹಕಾರ ನೀಡಿದರೆ ಅವಕಾಶ ಕಲ್ಪಿಸುವ ಉದ್ದೇಶ ನಮ್ಮದಾಗಿದೆ ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.

ಬೆಳಪು ಗ್ರಾ.ಪಂ. ಕೈಗೊಂಡ ಅಭಿವೃದ್ಧಿ ಯೋಜನೆಗಳು ಆರ್ಥಿಕ ಸಂಪನ್ಮೂಲ ಅಭಿವೃದ್ಧಿಗೆ ಪಂಚಾಯತ್ ರೂಪಿಸಿದ ಯೋಜನೆ, ಸಮಗ್ರವಾದ ಕ್ರೀಡಾಂಗಣ ನಿರ್ಮಾಣ, ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಬಗ್ಗೆ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ತ್ಯಾಜ್ಯ ವಿಲೇವಾರಿಗೆ ವಾಹನ ಖರೀದಿ ಮತ್ತು ರಾಜ್ಯಕ್ಕೆ ಮಾದರಿಯಾದ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ವಿಶೇಷವಾಗಿ ಒತ್ತು ನೀಡುವುದೆಂದು ತಿಳಿಸಿದರು.
ಪಂಚಾಯತ್ ಭೇಟಿ ಸಂದರ್ಭದಲ್ಲಿ ಜಿ. ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗ್ರಾ.ಪಂ. ಉಪಾಧ್ಯಕ್ಷರಾದ ಶೋಭಾ ಭಟ್, ಪಿ.ಡಿ.ಒ ಹೆಚ್. ಆರ್. ರಮೇಶ್, ಕಾರ್ಯದರ್ಶಿ ಸುಮಿತ್ರಾ ಆಚಾರ್ಯ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

52 minutes ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

1 hour ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago