Featured

ಬೆಳಪು : ಕಾಪು ತಾಲೂಕಿನ ಮೊದಲ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣ -Vishwanews24

ಬೆಳಪು : ಕಾಪು ತಾಲೂಕಿನ ಮೊದಲ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣ -Vishwanews24

ಸ್ಥಳೀಯರಿಗೆ ಆದ್ಯತೆ ನೀಡಲು ಮನವಿ: ಡಾ| ದೇವಿಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷರು, ಬೆಳಪು ಗ್ರಾಮ ಪಂಚಾಯತ್

ಕಾಪು: ಬೆಳಪು ಗ್ರಾಮದಲ್ಲಿ ಕಾಪು ತಾಲೂಕಿನ ಮೊತ್ತ ಮೊದಲ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ತರಗತಿಗಳು ಪ್ರಾರಂಭಗೊಳ್ಳುವ ನಿರೀಕ್ಷೆಯಿದೆ.

ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಇಲಾಖೆಯಿಂದ ಮಂಜೂರಾತಿ ಪಡೆದು ಬೆಳಪು ಗ್ರಾಮದ 5.36 ಎಕರೆ ಸರಕಾರಿ ಜಮೀನಿನಲ್ಲಿ ಸುಮಾರು 8 ಕೋಟಿ ರೂಪಾಯಿ ವೆಚ್ಚದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಯು ನಡೆದಿದ್ದು, ಕಾಪು ತಾಲೂಕು ಮತ್ತು ಬೆಳಪು ಗ್ರಾಮಕ್ಕೆ ಮುಕುಟ ಪ್ರಾಯದಂತಿದೆ. ನೆಲ ಮಹಡಿ ಮತ್ತು ಪ್ರಥಮ ಮಹಡಿ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡ ನಿರ್ಮಾಣ ಕಾಮಗಾರಿಯ ಜೊತೆಗೆ ವಿದ್ಯುತ್, ನೀರು ಸಹಿತವಾದ ಆವಶ್ಯಕ ಮೂಲ ಸೌಕರ್ಯಗಳನ್ನು ಅಳವಡಿಸಲಾಗಿದೆ.

ಎಐಸಿಟಿಇ ವಿಭಾಗಕ್ಕೆ ಪ್ರಸ್ತಾವನೆ ಸಲ್ಲಿಕೆ: ಸರಕಾರಿ ಪಾಲಿಟೆಕ್ನಿಕ್ ವಿದ್ಯಾಲಯಗಳಲ್ಲಿ ಡಿಪ್ಲೋಮಾ ಕೋರ್ಸ್‌ಗಳನ್ನು ಪ್ರಾರಂಭಿಸಲು ಎಐಸಿಟಿಇ (ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್) ಸಂಸ್ಥೆಯು ಆರಂಭಿಕ ಅನುಮೋದನೆ ನೀಡಬೇಕಿದೆ. ಎಐಸಿಟಿಇ ಅನುಮೋದನೆ ದೊರಕಿದ ಬಳಿಕ ರಾಜ್ಯ ಸರಕಾರ ವಿವಿಧ ಕೋರ್ಸ್‌ಗಳು ಮತ್ತು ಹುದ್ದೆಗಳನ್ನು ಮಂಜೂರುಗೊಳಿಸಲಿದ್ದು, ಬೆಳಪು ಸರಕಾರಿ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ತಾಂತ್ರಿಕ ಶೈಕ್ಷಣಿಕ ತರಗತಿಗಳನ್ನು ಪ್ರಾರಂಭಿಸಲು ಸಂಬಂಧಪಟ್ಟ ವಿಭಾಗಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಇಲಾಖಾ ಮಂಜೂರಾತಿ ಮತ್ತು ಅನುಮೋದನೆ ದೊರಕಿದ ಕೂಡಲೇ ಕೋರ್ಸ್‌ಗಳನ್ನು ಗೊತ್ತು ಮಾಡಿ, ಸಿಬಂದಿಗಳನ್ನು ನೇಮಿಸುವುದರ ಜೊತೆಗೆ 2021-22ನೇ ಶೈಕ್ಷಣಿಕ ವರ್ಷದಲ್ಲಿ ತರಗತಿಗಳನ್ನು ಪ್ರಾರಂಭಿಸುವ ನಿರೀಕ್ಷೆ ಹೊಂದಲಾಗಿದೆ.

ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ರಾಜ್ಯದ ಜನತೆಯ ಆಶೀರ್ವಾದ ಇರೋವರೆಗೆ ನನ್ನನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ : ಸಿಎಂ BSY -Vishwanews24

ಪ್ರಸ್ತುತ ಮಣಿಪಾಲ ಮತ್ತು ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸಿವಿಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈಯನ್ಸ್ ಇಂಜಿನಿಯರಿಂಗ್, ಎಲೆಕ್ಟಾನಿಕ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ಕಾರ್ಯ ನಿರ್ವಹಿಸುತ್ತಿವೆ. ಬೆಳಪು ಕಾಲೇಜಿನಲ್ಲಿ ಇಲೆಕ್ಟಿಕಲ್ ಮತ್ತು ಇಲೆಕ್ಟಾನಿಕ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಇಲೆಕ್ಟಾನಿಕ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್, ಆಟೋ ಮೊಬೈಲ್ ಇಂಜಿನಿಯರಿಂಗ್ ಸಹಿತವಾದ ನಾಲ್ಕು ಕೋರ್ಸ್‌ಗಳನ್ನು ಆರಂಭಿಸಲು ಚಿಂತನೆ ನಡೆದಿದೆ.

ಆನ್‌ಲೈನ್ ಮೂಲಕ ಸೀಟು ಹಂಚಿಕೆ: ಬೆಳಪು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ. ಅದಕ್ಕಾಗಿ ಎಐಸಿಟಿಇ ಅಧಿಕೃತವಾಗಿ ನೊಟಿಫಿಕೇಷನ್ ಹೊರಡಿಸಲಿದೆ. ಆ ಬಳಿಕ ಆನ್‌ಲೈನ್ ವ್ಯವಸ್ಥೆಯಡಿ ವಿದ್ಯಾರ್ಥಿಗಳು ಸೀಟ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಿಂದಲೂ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ಪಡೆದುಕೊಳ್ಳಲು ಸೇರ್ಪಡೆಗೊಳ್ಳಲು ಅವಕಾಶವಿದೆ. ಕೆಟಗರಿ ಮತ್ತು ಮೀಸಲು ಮತ್ತು ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆಯಾಗಲಿದೆ. ಇಲ್ಲಿ ಸುಮಾರು 240 ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಅವಕಾಶವಿದ್ದು, ತರಗತಿ ಆರಂಭಕ್ಕೆ ಮೊದಲು ಪ್ರಾಂಶುಪಾಲರು, ರಿಜಿಸ್ಟ್ರಾರ್ ಸೇರಿದಂತೆ 86 ಹುದ್ದೆಗಳು ಸೃಷ್ಟಿಯಾಗಲಿದ್ದು, ಸಿಬಂದಿಗಳ ನೇಮಕಾತಿಗೂ ಸರಕಾರ ಮುತುವರ್ಜಿ ವಹಿಸಬೇಕಿದೆ.

ಸ್ಥಳೀಯರಿಗೆ ಆದ್ಯತೆ ನೀಡಲು ಮನವಿ: ಬೆಳಪು ಗ್ರಾಮವು ಶೈಕ್ಷಣಿಕ ಗ್ರಾಮವಾಗಿ ಬೆಳೆಯಬೇಕೆಂಬ ಗ್ರಾಮಸ್ಥರ ಬಹುಕಾಲದ ಕನಸೊಂದು ನನಸಾಗುತ್ತಿದೆ. ರಾಜ್ಯ ಸರಕಾರ, ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಅಧಿಕಾರಿಗಳು ಮತ್ತು ಗುತ್ತಿಗೆದಾರರ ಪೂರ್ಣ ಸಹಕಾರದಿಂದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು 2021-22ನೇ ಶೈಕ್ಷಣಿಕ ವರ್ಷದಿಂದ ತರಗತಿಗಳು ಆರಂಭಗೊಳ್ಳುವ ನಿರೀಕ್ಷೆ ಹೊಂದಲಾಗಿದೆ. ತರಗತಿ ಪ್ರಾರಂಭಕ್ಕೆ ಬೇಕಿರುವ ವ್ಯವಸ್ಥೆಗಳ ಜೋಡಣೆ, ಶಿಕ್ಷಣಾವಕಾಶ ಮತ್ತು ಉದ್ಯೋಗಾವಕಾಶದಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಲು ಸರಕಾರ ಮತ್ತು ಇಲಾಖೆಗೆ ಮನವಿ ಮಾಡಲಾಗುವುದು.

ಡಾ| ದೇವಿಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷರು, ಬೆಳಪು ಗ್ರಾಮ ಪಂಚಾಯತ್

ಉಡುಪಿ ಜಿಲ್ಲೆಯ ಮೂರನೇ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್: ಉಡುಪಿ ಜಿಲ್ಲೆಯ ಮಣಿಪಾಲ ಮತ್ತು ಕಾರ್ಕಳದಲ್ಲಿ ಸರಕಾರಿ ಪಾಲಿಟೆಕ್ನಿಕ್ ವಿದ್ಯಾಲಯಗಳಿದ್ದು ಬೆಳಪುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ಜಿಲ್ಲೆಗೆ ಮೂರನೇಯದಾಗಲಿದೆ. ಕಾಪು ತಾಲೂಕಿನ ಪ್ರಥಮ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಸರಕಾರಿ ಕಾಲೇಜ್‌ಗಳನ್ನು ಹೊರತುಪಡಿಸಿ ನಿಟ್ಟೆಯಲ್ಲಿ ಒಂದು ಅನುದಾನಿತ ಪಾಲಿಟೆಕ್ನಿಕ್ ವಿದ್ಯಾಲಯ ಕಾರ್ಯ ನಿರ್ವಹಿಸುತ್ತಿದ್ದು, ಎರಡು ಖಾಸಗಿ ತಾಂತ್ರಿಕ ವಿದ್ಯಾಸಂಸ್ಥೆಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಪಿಟಿ, ಬಂಟ್ವಾಳ, ಬೋಂದೆಲ್‌ನಲ್ಲಿ ಮೂರು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಿವೆ. ಮೂಡಬಿದ್ರಿ, ಸುಂಕದಕಟ್ಟೆ ಮತ್ತು ಸುಳ್ಯದಲ್ಲಿ ಅನುದಾನಿತ ತಾಂತ್ರಿಕ ವಿದ್ಯಾಲಯಗಳು ಕಾರ್ಯ ನಿರ್ವಹಿಸುತ್ತಿವೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

13 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

13 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

13 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

14 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

14 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

14 hours ago