ಕಾಪು: ಬೆಳಪುವಿಗೆ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡುವ ಸಮಯದಲ್ಲಿ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿರುವ ಕುರಿತು ಬೆಳಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ದೇವಿಪ್ರಸಾದ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಪು ಎಂಬ ಮಾದರಿ ಗ್ರಾಮಕ್ಕೆ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್ ಹಾಗೂ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ ನೀಡಿದ್ದು ಸ್ಥಳೀಯ ಪಂಚಾಯಿತಿ ಹಾಗೂ ಸದಸ್ಯರಿಗೆ ಯಾವುದೇ ರೀತಿಯ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿರುವ ಬಗ್ಗೆ ಬೆಳಪು ದೇವಿಪ್ರಸಾದ್ ಶೆಟ್ಟಿ ಆಕ್ರೋಶ ಹೊರಹಾಕಿದ್ದಾರೆ.
ಬೆಳಪು ಕಾಡು ಇದ್ದ ಗ್ರಾಮವನ್ನು ನಾಡು ಮಾಡಲು ಬೆವರನ್ನು ರಕ್ತವನ್ನು ಆಗಿ ಸುರಿಸಿ ಸಾಕಷ್ಟು ವರ್ಷ ಹಗಲು-ರಾತ್ರಿ ದುಡಿದಿರುವವರು ನಾವು ಇವತ್ತು ರಾಜ್ಯ ಕೈಗಾರಿಕಾ ಸಚಿವರ ಭೇಟಿಯ ಬಗ್ಗೆ ಕಿಂಚಿತ್ತು ಮಾಹಿತಿ ನೀಡುವ ಸೌಜನ್ಯ ತೋರದ ಜಿಲ್ಲಾಡಳಿತ ಹಾಗೂ ಸ್ಥಳೀಯ ಶಾಸಕರಬಗ್ಗೆ ದೇವಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದರು.
ಇಂದು ಬೆಳಪು ದೇಶದಲ್ಲಿ ಮಾದರಿ ಗ್ರಾಮವಾಗಿದೆ ಶೈಕ್ಷಣಿಕ, ಪ್ರವಾಸೋದ್ಯಮ, ಕೈಗಾರಿಕಾ ವಲಯವನ್ನಾಗಿ ಮಾಡಲು ಅದರ ಹಿಂದಿನ ಶ್ರಮದಲ್ಲಿ ರಾಜಕೀಯ ಮಾಡಿಲ್ಲ ಆದರೇ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ರಾಜಕೀಯ ಮಾಡುವುದಾದರೆ ನಾವು ರಾಜಕೀಯ ಮಾಡಲು ಸಿದ್ಧವಾಗಿದ್ದೇವೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…