ಬೆಳಪು ಗ್ರಾಮದ ಅಭಿವೃದ್ಧಿಗೆ ಸೂಕ್ತ ಅನುದಾನ ಬೆಳಪು ಗ್ರಾಮ ಸಭೆಯಲ್ಲಿ ಶಾಸಕ ಲಾಲಾಜಿ ಮೆಂಡನ್.
ಕಾಪು: ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಸಂಶೋಧನಾ ಕೇಂದ್ರ ಸ್ಥಾಪನೆಯಾದಲ್ಲಿ ಬೆಳಪು ಗ್ರಾಮ ಜಿಲ್ಲೆಯಲ್ಲಿ ಪ್ರಧಾನ ವಿದ್ಯಾಕ್ಷೇತ್ರವಾಗಿ ಮೂಡಿಬರಲಿದೆ. ಹಾಗಾಗಿ ಬೆಳಪು ಗ್ರಾಮದ ಸಮಗ್ರ ಅಭಿವೃದ್ಧಿಗೆ ಶಾಸಕನಾಗಿ ಸೂಕ್ತ ಅನುದಾನ ನೀಡಲು ಬದ್ಧ ಎಂದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು.
ಅವರು ಬೆಳಪು ಗ್ರಾಮ ಪಂಚಾಯತ್‍ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಪಾಲ್ಗೊಂಡು ಫಲಾನುಭವಿಗಳಿಗೆ ಸಹಾಯಧನ ಚೆಕ್ ವಿತರಿಸಿ ಮಾತಾನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಳಪು ಪಂಚಾಯತ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮಾತನಾಡಿ , ಬೆಳಪು ಗ್ರಾಮ ರಾಜಕೀಯ ರಹಿತವಾಗಿ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ ಮತ್ತು ಕಸ ವಿಲೇವಾರಿ ಮಾಡಲು ಬೇಕಾದ ಎಲ್ಲಾ ವ್ಯವಸ್ಥೆಯನ್ನ ಪಂಚಾಯತ್ ವ್ಯಾಪ್ತಿಯಲ್ಲಿಯೇ ಸ್ಥಾಪಿಸಲಾಗಿದೆ ಆದರೂ ಜನ ರಸ್ತೆ ಬದಿಗೆ ತ್ಯಾಜ್ಯಗಳನ್ನ ಎಸೆಯುತ್ತಿರುವುದು ಅನಾಗರಿಕ ವರ್ತನೆ ಎಂದರು. ಉಪಸ್ಥಿತರಿದ್ದ ವಿವಿಧ ಇಲಾಖಾಧಿಕಾರಿಗಳು ಇಲಾಖಾ ಮಾಹಿಗಳನ್ನು ನೀಡಿದರು. ಪಶು ಸಂಗೋಪನ ಇಲಾಖಾ ಸಹಾಯಕ ನಿರ್ದೇಶಕ ಡಾ: ದಯಾನಂದ್ ಪೈ ನೋಡಲ್ ಅಧಿಕಾರಿಯಾಗಿದ್ದರು. ಸಹಾಯಕ ಕೃಷಿ ಅಧಿಕಾರಿ ಶೇಖರ್ ಪಿ, ಗ್ರಾಮ ಲೆಕ್ಕಿಗ ಗಣೇಶ್ ಮೇಸ್ತ ,ತೋಟಗಾರಿಕ ಸಹಾಯಕಿ ಶ್ವೇತಾ ಹಿರೇಮಠ್, ಉಪಾದ್ಯಕ್ಷೆ ಶೋಭಾ ಭಟ್ , ಸದಸ್ಯರು ಸೇರಿದಂತೆ ವಿವಿಧ ಇಲಾಖೆಯ
ಅಧಿüಕಾರಿಗಳು ಉಪಸ್ಥಿತರಿದ್ದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…