Featured

ಬೆಳಪು ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿ ಡಾ. ದೇವಿಪ್ರಸಾದ್ ಶೆಟ್ಟಿಯ ತಂಡ ಅವಿರೋಧ ಆಯ್ಕೆ.. vishwanews24

ಬೆಳಪು ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿ ಡಾ. ದೇವಿಪ್ರಸಾದ್ ಶೆಟ್ಟಿಯ ತಂಡ ಅವಿರೋಧ ಆಯ್ಕೆ..

ಕಳೆದ 35 ವರ್ಷಗಳಿಂದ 8ನೇ ಅವಧಿಗೆ ಅವಿರೋಧ ಆಯ್ಕೆ..

ಪ್ರಾಥಮಿಕ ಸಹಕಾರಿ ವ್ಯವಸ್ಥೆಯಲ್ಲಿ ಹೊಸ ಇತಿಹಾಸ..

ಬೆಳಪು ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಹೊಸ ಇತಿಹಾಸ ನಿರ್ಮಾಣ..

ಬೆಳಪು: ಬೆಳಪು ವ್ಯವಸಾಯ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಡಾ. ದೇವಿಪ್ರಸಾದ್ ಶೆಟ್ಟಿಯವರ ತಂಡ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಕರ್ನಾಟಕ ಸರಕಾರದ ನಿಯಮದಂತೆ ಸಹಕಾರಿ ಸಂಘಗಳ ಚುನಾವಣಿಗೆ ಆದೇಶವಾಗಿದ್ದು, ಪ್ರತಿಷ್ಠಿತ ಬೆಳಪು ವ್ಯವಸಾಯ ಸಹಕಾರಿ ಸಂಘದ ಚುನಾವಣೆಗೆ ನಿರ್ದೇಶಕರುಗಳ ಪೈಕಿ 12 ಮಂದಿ ಮಾತ್ರ ನಾಮಪತ್ರ ಸಲ್ಲಿಸಿದ್ದು, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಅವರ ತಂಡ ಆವಿರೋಧವಾಗಿ ಆಯ್ಕೆಯಾಗಿದೆಯೆಂದು ಚುನಾವಣಾಧಿಕಾರಿ ಕೆ. ಆರ್. ರೋಹಿತ್ ಪ್ರಕಟಿಸಿದ್ದಾರೆ.

ಈ ಸಂದರ್ಭ ಬೆಳಪು ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಸುಲೋಚನಾ ಉಪಸ್ಥಿತರಿದ್ದರು.

ಬೆಳಪು ವ್ಯವಸಾಯ ಸಹಕಾರಿ ಸಂಘದಲ್ಲಿ ಕಳೆದ 35 ವರ್ಷಗಳಿಂದ 8 ನೇ ಅವಧಿಗೆ ಸತತವಾಗಿ ಅವಿರೋಧವಾಗಿ ಆಯ್ಕೆಯಾಗುತ್ತಾ ಬಂದಿರುವುದು ಪ್ರಾಥಮಿಕ ಸಹಕಾರಿ ವ್ಯವಸ್ಥೆಯಲ್ಲಿ ಇತಿಹಾಸವಾಗಿದೆ.

2024-25 ರಿಂದ ಮುಂದಿನ 5 ವರ್ಷಕ್ಕೆ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಪಾಂಡು ಶೆಟ್ಟಿ, ಆಲಿಯಬ್ಬ, ಗೋಪಾಲ ಪೂಜಾರಿ, ಸಾಧು ಶೆಟ್ಟಿ, ಮೀನ ಪೂಜಾರ್ತಿ, ಸುಂದರಿ, ವಿಮಲ ಆಂಚನ್, ಅನಿತ, ಪಾಂಡು ಎಮ್ ಶೇರಿಗಾರ, ಸೈಮನ್ ಡಿಸೋಜ, ದ್ಯುಮಣಿ ಆರ್ ಭಟ್‌ರವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಅವರು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಬೆಳಪು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago