ಕಾಪು: ಬೆಳಪು ಸಿ.ಎ ಬ್ಯಾಂಕ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಹಾಗೂ ಬ್ಯಾಂಕಿನ ಪಿಗ್ಮಿ ಸಂಗ್ರಹಕರಿಗೆ ನಗದು ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆಯಿತು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಡಾ ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತಾನಾಡಿ” ಕೊರೋನಾ ಎನ್ನುವ ಮಹಾಮಾರಿ ಇಡೀ ವಿಶ್ವವನ್ನೇ ವ್ಯಾಪಿಸಿ ಮನುಕುಲದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು ಮನುಷ್ಯ ಮನುಷ್ಯನನ್ನೆ ಅನುಮಾನದಿಂದ ನೋಡುವ ಕಾಲ ಎದುರಾಗಿತ್ತು ಅಂತಹ ಸಮಯದಲ್ಲಿ ಸ್ವಾರ್ಥ ರಹಿತವಾಗಿ ಸಮಾಜಕ್ಕೆ ಮತ್ತು ಕೊರೋನಾದ ವಿರುದ್ಧ ವಾರಿಯರ್ಸ್ ರೀತಿಯಲ್ಲಿ ಕಾರ್ಯ ಮಾಡಿರುವಲ್ಲಿ ಆಶಾ ಕಾರ್ಯಕರ್ತೆಯರ ಕೊಡುಗೆ ಅಪಾರವಾಗಿದೆ.
ಕೆಲವೊಂದು ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರ ವಿರುದ್ಧ ಹಲ್ಲೆ ನಡೆದ ಸಂಧರ್ಭದಲ್ಲಿ ಕೂಡ ಹಿಂಜರಿಯದೆ ಸಮಾಜದ ಒಳಿತಿಗಾಗಿ ಕೆಲಸ ಮಾಡಿದ ಕಾರ್ಯಕರ್ತೆಯರನ್ನು ಗುರುತಿಸುವುದು ಧರ್ಮ ಮತ್ತು ಕರ್ತವ್ಯ ಎಂಬ ದೃಷ್ಟಿಯಿಂದ ಬೆಳಪು ಸಹಕಾರಿ ವ್ಯವಸಾಯ ಸಂಘದ ವತಿಯಿಂದ ಗೌರವಾರ್ಥವಾಗಿ ನಗದು ಪ್ರೋತ್ಸಾಹ ಧನ ವಿತರಣೆ ಮಾಡಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯ ಯು.ಸಿ ಶೇಖಬ್ಬ ಉಪಾಧ್ಯಕ್ಷ ಶ್ರೀ ವತ್ಸರಾವ್,ನಿರ್ದೇಶಕರಾದ ಮೋಹನ್ ರಾವ್,ಪಾಂಡು ಶೇರಿಗಾರ,ಅಲಿಯಬ್ಬ,ಗೋಪಾಲ ಪೂಜಾರಿ,ಸೈಮನ್ ಡಿಸೋಜ,ಪಾಂಡು ಶೆಟ್ಟಿ,ಶ್ರೀಮತಿ ವೇದಾವತಿ ಕುಂದರ್,ಮೀನ ಪೂಜಾರಿ, ಶ್ರೀಮತಿ ವಿಮಲ ಅಂಚನ್,ಹಾಗೂ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಲೋಚನ ಉಪಸ್ಥಿತರಿದ್ದರು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…