ಬೆಳಪು ಸಿ.ಎ ಬ್ಯಾಂಕ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ನಗದು ಪ್ರೋತ್ಸಾಹ ಧನ ವಿತರಣೆ.

ಬೆಳಪು ಸಿ.ಎ ಬ್ಯಾಂಕ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ನಗದು ಪ್ರೋತ್ಸಾಹ ಧನ ವಿತರಣೆ.

ಕಾಪು: ಬೆಳಪು ಸಿ.ಎ ಬ್ಯಾಂಕ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಹಾಗೂ ಬ್ಯಾಂಕಿನ ಪಿಗ್ಮಿ ಸಂಗ್ರಹಕರಿಗೆ ನಗದು ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆಯಿತು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಡಾ ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತಾನಾಡಿ” ಕೊರೋನಾ ಎನ್ನುವ ಮಹಾಮಾರಿ‌ ಇಡೀ ವಿಶ್ವವನ್ನೇ ವ್ಯಾಪಿಸಿ‌ ಮನುಕುಲದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು ಮನುಷ್ಯ ಮನುಷ್ಯನನ್ನೆ ಅನುಮಾನದಿಂದ ನೋಡುವ ಕಾಲ ಎದುರಾಗಿತ್ತು ಅಂತಹ ಸಮಯದಲ್ಲಿ ಸ್ವಾರ್ಥ ರಹಿತವಾಗಿ ಸಮಾಜಕ್ಕೆ ಮತ್ತು ಕೊರೋನಾದ ವಿರುದ್ಧ ವಾರಿಯರ್ಸ್‌ ರೀತಿಯಲ್ಲಿ ಕಾರ್ಯ ಮಾಡಿರುವಲ್ಲಿ ಆಶಾ ಕಾರ್ಯಕರ್ತೆಯರ ಕೊಡುಗೆ ಅಪಾರವಾಗಿದೆ.
ಕೆಲವೊಂದು ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರ ವಿರುದ್ಧ ಹಲ್ಲೆ ನಡೆದ ಸಂಧರ್ಭದಲ್ಲಿ ಕೂಡ ಹಿಂಜರಿಯದೆ ಸಮಾಜದ ಒಳಿತಿಗಾಗಿ ಕೆಲಸ ಮಾಡಿದ ಕಾರ್ಯಕರ್ತೆಯರನ್ನು ಗುರುತಿಸುವುದು ಧರ್ಮ ಮತ್ತು ಕರ್ತವ್ಯ ಎಂಬ ದೃಷ್ಟಿಯಿಂದ ಬೆಳಪು ಸಹಕಾರಿ ವ್ಯವಸಾಯ ಸಂಘದ ವತಿಯಿಂದ ಗೌರವಾರ್ಥವಾಗಿ ನಗದು ಪ್ರೋತ್ಸಾಹ ಧನ ವಿತರಣೆ ಮಾಡಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯ ಯು.ಸಿ ಶೇಖಬ್ಬ ಉಪಾಧ್ಯಕ್ಷ ಶ್ರೀ ವತ್ಸರಾವ್,ನಿರ್ದೇಶಕರಾದ ಮೋಹನ್ ರಾವ್,ಪಾಂಡು ಶೇರಿಗಾರ,ಅಲಿಯಬ್ಬ,ಗೋಪಾಲ ಪೂಜಾರಿ,ಸೈಮನ್ ಡಿಸೋಜ,ಪಾಂಡು ಶೆಟ್ಟಿ,ಶ್ರೀಮತಿ ವೇದಾವತಿ ಕುಂದರ್,ಮೀನ ಪೂಜಾರಿ, ಶ್ರೀಮತಿ ವಿಮಲ ಅಂಚನ್,ಹಾಗೂ ಬ್ಯಾಂಕಿನ‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಲೋಚನ ಉಪಸ್ಥಿತರಿದ್ದರು

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago