Featured

ಬೆಳೆಹಾನಿ, ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಕೊಡುವೆ’ : ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ -Vishwanews24

ಬೆಳೆಹಾನಿ, ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಕೊಡುವೆ’ : ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ -Vishwanews24

ಬಾಗಲಕೋಟೆ/ಬೆಳಗಾವಿ: ‘ಸೆಪ್ಟೆಂಬರ್ 12ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಕೇಂದ್ರದಿಂದ ಹೆಚ್ಚಿನ ನೆರವು ಕೋರಲಿದ್ದೇನೆ. ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೀಡಾದವರಿಗೆ ಸಾಲ ತಂದಾದರೂ ನೆರವಾಗುತ್ತೇನೆ. ಬೆಳೆಹಾನಿ, ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಕೊಡುವೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದರು.

ಆಲಮಟ್ಟಿಯಲ್ಲಿ ಮಂಗಳವಾರ ಕೃಷ್ಣೆಗೆ ಬಾಗಿನ ಅರ್ಪಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಕೋವಿಡ್ ಕಾರಣದಿಂದ ರಾಜ್ಯ ಹಾಗೂ ಕೇಂದ್ರದ ಹಣಕಾಸಿನ ಸ್ಥಿತಿ ಸರಿ ಇಲ್ಲ. ಅಂತಹ ಪರಿಸ್ಥಿತಿಯಲ್ಲೂ ಕೇಂದ್ರದಿಂದ ಹೆಚ್ಚಿನ ಅನುದಾನ ತರಲು ಪ್ರಯತ್ನಿಸುತ್ತಿದ್ದೇನೆ. ಜಿಎಸ್‌ಟಿಗೆ ಸಂಬಂಧಿಸಿದಂತೆ ರಾಜ್ಯದ ಪಾಲಿನ ₹13 ಸಾವಿರ ಕೋಟಿ ಪಡೆಯಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸಿದ್ದೇನೆ. ಆಗಸ್ಟ್ 27ರಂದು ನಡೆಯಲಿರುವ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತಿದೆ. 2–3 ತಿಂಗಳಲ್ಲಿ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯೂ ಕಾಣಬಹುದು’ ಎಂಬ ಆಶಾಭಾವ ವ್ಯಕ್ತಪಡಿಸಿದರು.

‘ಕೋವಿಡ್ ಚಿಕಿತ್ಸೆಗೆ ಔಷಧ ಖರೀದಿ ವಿಚಾರದಲ್ಲಿ ವಿರೋಧ ಪಕ್ಷದವರ ಆಗ್ರಹದಂತೆ ಶ್ವೇತಪತ್ರ ಹೊರಡಿಸುವ ಅಗತ್ಯವಿಲ್ಲ. ಮುಂಬರುವ ಅಧಿವೇಶನದಲ್ಲಿ ಅವರ ಎಲ್ಲ ಆರೋಪಗಳಿಗೂ ಸಮರ್ಥ ಉತ್ತರ ನೀಡಲಾಗುವುದು’ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

21 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

21 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

21 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

22 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

22 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

22 hours ago