Featured

ಬೆಳ್ತಂಗಡಿ:ಅಪರಿಚಿತ ಸಾವುಗಳ ತನಿಖೆಗೆ ಒತ್ತಾಯಿಸಿ  S I T ಕಚೇರಿಗೆ ತೆರಳಿ ದೂರು ನೀಡಿದ ಮಹೇಶ ಶೆಟ್ಟಿ ತಿಮರೋಡಿ – vishwanews24

ಬೆಳ್ತಂಗಡಿ:ಅಪರಿಚಿತ ಸಾವುಗಳ ತನಿಖೆಗೆ ಒತ್ತಾಯಿಸಿ  S I T ಕಚೇರಿಗೆ ತೆರಳಿ ದೂರು ನೀಡಿದ ಮಹೇಶ ಶೆಟ್ಟಿ ತಿಮರೋಡಿ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಕ್ಕೆ ಸೇರಿದ ವಿವಿಧ ವಸತಿ ಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು “ಅಪರಿಚಿತ ಸಾವುಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ಇವು ಸಂಭಾವ್ಯ ಕೊಲೆ ಪ್ರಕರಣಗಳಾಗಿರುವುದರಿಂದ ವಿಶೇಷ ತನಿಖಾ ದಳ (SIT) ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸು ವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಎಸ್.ಐ.ಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.

ಗುರುವಾರ ರಾತ್ರಿ ಬೆಳ್ತಂಗಡಿ ಎಸ್ ಐ ಟಿ ಕಚೇರಿಗೆ ಮಹೇಶ್ ಶೆಟ್ಟಿ ಭೇಟಿ ನೀಡಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳನ್ನು ಆಧರಿಸಿ ಈ ದೂರನ್ನು ನೀಡಿದ್ದಾರೆ. ಇದರೊಂದಿಗೆ ಮಾಹಿತಿ ಹಕ್ಕಿನಲ್ಲಿ ಪಡೆದಿದ್ದ ದಾಖಲೆಗಳನ್ನು ನೀಡಿರುವುದಾಗಿ ತಿಳಿದು ಬಂದಿದೆ.

ಮಹೇಶ್ ಶೆಟ್ಟಿ ತಿಮರೋಡಿ ನೀಡಿರುವ ದೂರಿನಲ್ಲಿ ಗಾಯತ್ರಿ, ಶಾರಾವತಿ ಮತ್ತು ವೈಶಾಲಿ ವಸತಿ ಗೃಹಗಳಲ್ಲಿ ನಡೆದ ನಾಲ್ಕು ಸಾವುಗಳನ್ನು ಪ್ರಸ್ತಾಪಿಸಲಾಗಿದ್ದು, ಇವುಗಳನ್ನು “ಅಪರಿಚಿತ ಶವಗಳೆಂದು ಘೋಷಿಸಿ ಗ್ರಾಮ ಪಂಚಾಯತ್ ಮೂಲಕ ತರಾತುರಿಯಲ್ಲಿ ಸಮಾಧಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣಗಳಲ್ಲಿ ಕೇವಲ UDR (ಅಸ್ವಾಭಾವಿಕ ಮರಣ ವರದಿ) ದಾಖಲಿಸಲಾಗಿದ್ದು, ಕೊಲೆ ಅಥವಾ ಆತ್ಮಹತ್ಯೆಯ ಸಂಶಯವಿದ್ದರೂ ಎಫ್.ಐ‌.ಆರ್ ದಾಖಲಿಸದಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ದೂರಿನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

15 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

15 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

16 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

16 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

17 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

17 hours ago