ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಕ್ಕೆ ಸೇರಿದ ವಿವಿಧ ವಸತಿ ಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು “ಅಪರಿಚಿತ ಸಾವುಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ಇವು ಸಂಭಾವ್ಯ ಕೊಲೆ ಪ್ರಕರಣಗಳಾಗಿರುವುದರಿಂದ ವಿಶೇಷ ತನಿಖಾ ದಳ (SIT) ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸು ವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಎಸ್.ಐ.ಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.
ಗುರುವಾರ ರಾತ್ರಿ ಬೆಳ್ತಂಗಡಿ ಎಸ್ ಐ ಟಿ ಕಚೇರಿಗೆ ಮಹೇಶ್ ಶೆಟ್ಟಿ ಭೇಟಿ ನೀಡಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳನ್ನು ಆಧರಿಸಿ ಈ ದೂರನ್ನು ನೀಡಿದ್ದಾರೆ. ಇದರೊಂದಿಗೆ ಮಾಹಿತಿ ಹಕ್ಕಿನಲ್ಲಿ ಪಡೆದಿದ್ದ ದಾಖಲೆಗಳನ್ನು ನೀಡಿರುವುದಾಗಿ ತಿಳಿದು ಬಂದಿದೆ.
ಮಹೇಶ್ ಶೆಟ್ಟಿ ತಿಮರೋಡಿ ನೀಡಿರುವ ದೂರಿನಲ್ಲಿ ಗಾಯತ್ರಿ, ಶಾರಾವತಿ ಮತ್ತು ವೈಶಾಲಿ ವಸತಿ ಗೃಹಗಳಲ್ಲಿ ನಡೆದ ನಾಲ್ಕು ಸಾವುಗಳನ್ನು ಪ್ರಸ್ತಾಪಿಸಲಾಗಿದ್ದು, ಇವುಗಳನ್ನು “ಅಪರಿಚಿತ ಶವಗಳೆಂದು ಘೋಷಿಸಿ ಗ್ರಾಮ ಪಂಚಾಯತ್ ಮೂಲಕ ತರಾತುರಿಯಲ್ಲಿ ಸಮಾಧಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಪ್ರಕರಣಗಳಲ್ಲಿ ಕೇವಲ UDR (ಅಸ್ವಾಭಾವಿಕ ಮರಣ ವರದಿ) ದಾಖಲಿಸಲಾಗಿದ್ದು, ಕೊಲೆ ಅಥವಾ ಆತ್ಮಹತ್ಯೆಯ ಸಂಶಯವಿದ್ದರೂ ಎಫ್.ಐ.ಆರ್ ದಾಖಲಿಸದಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ದೂರಿನಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…