ಮಂಗಳೂರು: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮುತ್ತಿಗೆ ಯತ್ನದ ವೇಳೆ ಮಾಜಿ ಶಾಸಕ ವಸಂತ ಬಂಗೇರಾ ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ. ಪರಸ್ಪರ ತಳ್ಳಾಡಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟ್ ಬಳಿಯೇ ಪ್ರತಿಭಟನಾಕರರನ್ನು ಪೊಲೀಸರು ತಡೆದಿದ್ದಾರೆ.
ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಮುತ್ತಿಗೆ ಯತ್ನಿಸಿದ್ದಾರೆ. 15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಕಳೆದ ವರ್ಷದ ಪ್ರವಾಹದ ವೇಳೆ ಕಾಳಜಿ ರಿಲೀಫ್ ಫಂಡ್ ಸ್ಥಾಪನೆ ಮಾಡಲಾಗಿತ್ತು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ವಸಂತ ಬಂಗೇರ, ನಗರ ಬ್ಲಾಕ್ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಬ್ಲಾಕ್ ಅಧ್ಯಕ್ಷ ರಂಜನ್ ಜಿ. ಗೌಡ ಮತ್ತಿತರ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…