Featured

ಬೆಳ್ತಂಗಡಿಯ ಮತದಾರರಿಗೆ ಅನ್ಯಾಯ ಆಗುತ್ತೆ ಅಂತಾದ್ರೆ ನಾನು ಜೈಲಲ್ಲಿ ಕೂರಲೂ ರೆಡಿ : ಹರೀಶ್ ಪೂಂಜಾ ಆಕ್ರೋಶ – vishwanews24

ಬೆಳ್ತಂಗಡಿ :  ಬಿಜೆಪಿ ಕಾರ್ಯಕರ್ತರನ್ನ ಮುಟ್ಟಿದ್ರೆ ಪೊಲೀಸರ ಕಾಲರ್ ಹಿಡಿಯಲು ನಾನು ರೆಡಿ..

ದಕ್ಷಿಣ ಕನ್ನಡ ಎಸ್‍ಪಿಗೆ ಬುದ್ಧಿ ಇಲ್ಲ, ಕಾಂಗ್ರೆಸ್ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ ..

ಒಬ್ಬ ನಿರಪರಾಧಿಗೆ ಅನ್ಯಾಯವಾಗದಂತೆ ನೋಡಿಕೊಳ್ಳೋದು ನನ್ನ ಜವಾಬ್ದಾರಿ..

ಮಂಗಳೂರು: ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನ ಮುಟ್ಟಿದ್ರೆ ಪೊಲೀಸರ ಕಾಲರ್ ಹಿಡಿಯಲು ನಾನು ರೆಡಿ ಎಂದು ಶಾಸಕ ಹರೀಶ್ ಪೂಂಜಾ   ಹೇಳಿದ್ದಾರೆ.

ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಎಸ್‍ಪಿಗೆ ಬುದ್ಧಿ ಇಲ್ಲ. ಕಾಂಗ್ರೆಸ್ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಭಟನೆಯಲ್ಲಿ ಪೊಲೀಸರಿಗೆ ಹರೀಶ್ ಪೂಂಜಾ ಅವಾಜ್ ಹಾಕಿದ್ದಾರೆ.

ನನ್ನ ಕಾರ್ಯಕರ್ತರನ್ನ, ಬಿಜೆಪಿ ಕಾರ್ಯಕರ್ತರನ್ನು ಅರೆಸ್ಟ್ ಮಾಡಿ ವಿನಾಕಾರಣ ಒಳಗೆ ಕೂರಿಸಿದಾಗ ನಾನು ಅಧಿಕಾರಯುತವಾಗಿಯೇ ಮಾತನಾಡೋದು. ಒಬ್ಬ ನಿರಪರಾಧಿಗೆ ಅನ್ಯಾಯವಾಗದಂತೆ ನೋಡಿಕೊಳ್ಳೋದು ನನ್ನ ಜವಾಬ್ದಾರಿ. ಮೊನ್ನೆನೂ ಅಷ್ಟೇ ಮಾತನಾಡಿದ್ದು. ಜನತಾ ಪಾರ್ಟಿಯ ಕಾರ್ಯಕರ್ತರ ಪರವಾಗಿ, ಬೆಳ್ತಂಗಡಿಯ ಮತದಾರರಿಗೆ ಅನ್ಯಾಯ ಆಗುತ್ತೆ ಅಂತಾದ್ರೆ ನಾನು ಜೈಲಲ್ಲಿ ಕೂರಲೂ ರೆಡಿ ಇದ್ದೇನೆ ಎಂದು ಆಕ್ರೋಶದ ಮಾತುಗಳನ್ನಾಡಿದರು.

ಜಿಲ್ಲಾ ವರಿಷ್ಠಾಧಿಕಾರಿಯವರ ತಲೆಯಲ್ಲಿ ಕೂದಲಿಲ್ಲ, ಎಸ್ ಪಿಯ ತಲೆಯಲ್ಲಿ ಕೂದಲಿಲ್ಲ. ನೋಡಿದ್ದೀರ ನೀವೂ, ನಾನು ಬರೇ ಕೂದಲಿಲ್ಲ ಅಂದುಕೊಂಡಿದ್ದೆ, ಒಳಗೆ ಮೆದುಳೂ ಇಲ್ಲ ಅಂತ ಈಗ ಗೊತ್ತಾಯ್ತು. ಇವರು ಯಾವ ರೀತಿ ಷಡ್ಯಂತ್ರ ಮಾಡಿದ್ದಾರೆ ಅಂದ್ರೆ ಶಶಿಯನ್ನು ಅರೆಸ್ಟ್ ಮಾಡಿದಾಕ್ಷಣ ಇನ್ಸ್‍ಪೆಕ್ಟರ್‍ಗೆ ಫೋನ್ ಮಾಡಿದ್ರೆ ಫೋನ್ ರಿಸೀವ್ ಮಾಡಲ್ಲ. ಎಷ್ಟು ಸಲ ಕಾಲ್ ಮಾಡಿದರೂ ರಾತ್ರಿ ನನ್ನ ಫೋನ್ ಕರೆಗೆ ಉತ್ತರಿಸಲಿಲ್ಲ. ಎಸ್‍ಪಿ ಕಾಂಗ್ರೆಸ್ ಏಜೆಂಟ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಅಂತ ಕಿಡಿಕಾರಿದ್ದಾರೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

10 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago