Featured

ಬೆಳ್ತಂಗಡಿ: ಅಕ್ರಮ ಗೋಮಾಂಸ ಅಡ್ಡೆಗೆ ಪೊಲೀಸ್ ದಾಳಿ ;  ಇಬ್ಬರ ಬಂಧನ  – vishwanews24

ಬೆಳ್ತಂಗಡಿ: ಅಕ್ರಮ ಗೋಮಾಂಸ ಅಡ್ಡೆಗೆ ಪೊಲೀಸ್ ದಾಳಿ ;  ಇಬ್ಬರ ಬಂಧನ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್‌ನೊಳಗೆ ನಡೆಯುತ್ತಿದ್ದ ಅಕ್ರಮ ಗೋಮಾಂಸ ಅಡ್ಡೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 91 ಕೆಜಿ ಗೋಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸುತ್ತಿದ್ದ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟುವಿನ ಅಬ್ದುಲ್ ನಝೀರ್ (36) ಮತ್ತು ಮಿತ್ತಬಾಗಿಲು ಗ್ರಾಮದ ಝಕಾರಿಯಾ (36) ಎಂದು ಗುರುತಿಸಲಾಗಿದೆ.

ನಿರೀಕ್ಷಕ ಸುಬ್ಬಪುರ್ ಮಠ ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಆನಂದ್ ಎಂ ಮತ್ತು ವೇಣೂರು ಪೊಲೀಸ್ ಠಾಣೆಯ ಪಿಎಸ್‌ಐ ಓಮನ ತಮ್ಮ ತಂಡದೊಂದಿಗೆ ಈ ದಾಳಿ ನಡೆಸಿದರು.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳು ದನಗಳನ್ನು ಕಳವು ಮಾಡಿ, ಅಕ್ರಮವಾಗಿ ವಧಿಸಿ ಮಾಂಸವನ್ನು ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ, ಪೊಲೀಸರು ಅಕ್ಟೋಬರ್ 27 ರಂದು ಮಧ್ಯಾಹ್ನ 2:30 ರ ಸುಮಾರಿಗೆ ಸ್ಥಳಕ್ಕೆ ದಾಳಿ ನಡೆಸಿ, 91 ಕೆಜಿ ಗೋಮಾಂಸ, ಚಾಕು ಮತ್ತು ಇತರ ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Vishwa News 24

Recent Posts

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

23 minutes ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

21 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

21 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

22 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

23 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

23 hours ago