ಬೆಳ್ತಂಗಡಿ : ಅಕ್ರಮ ಗೋಸಾಗಾಟದಲ್ಲಿ ಸಿಕ್ಕಿಬಿದ್ದ ಆರೋಪಿಯ ಮನೆ ಜಪ್ತಿ ಮಾಡಿದ ಪೊಲೀಸರು – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ : ಅಕ್ರಮ ಗೋಸಾಗಾಟದಲ್ಲಿ ಸಿಕ್ಕಿಬಿದ್ದ ಆರೋಪಿಯ ಮನೆ ಜಪ್ತಿ ಮಾಡಿದ ಪೊಲೀಸರು

ಬೆಳ್ತಂಗಡಿ: ಅಕ್ರಮ ಗೋಸಾಗಟದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಆರೋಪಿಯೊಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.

ನವೆಂಬರ್ 2 ರಂದು ಧರ್ಮಸ್ಥಳ ಪೊಲೀಸರು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್‌ ಯಾನೆ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.

ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ – vishwanews24

ದನ ನೀಡಿದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಝೊಹಾರ ಸೇರಿ ಮೂವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ5,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ 11,(1)(D) ಪ್ರಾಣಿ ಹಿಂಸೆ ಕಾಯಿದೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಮೂರು ದನಗಳನ್ನು ಆರೋಪಿ A-2 ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ತಂಚಿಬೆಟ್ಟು ನಿವಾಸಿ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯಲ್ಲಿ ಗೋಮಾಂಸ ಮಾಡುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ಉಳ್ಳಾದಲ್ಲಿರುವ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯನ್ನು ನವೆಂಬರ್ 4 ರಂದು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.

ಖ್ಯಾತ ವೈದ್ಯ ಡಾ. ಕೆ.ಪಿ. ಶೆಟ್ಟಿ ನಿಧನ- vishwanews24

Leave a Reply