ಬೆಳ್ತಂಗಡಿ: ಅಕ್ರಮ ಗೋಸಾಗಟದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಆರೋಪಿಯೊಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.
ನವೆಂಬರ್ 2 ರಂದು ಧರ್ಮಸ್ಥಳ ಪೊಲೀಸರು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್ ಯಾನೆ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.
ದನ ನೀಡಿದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಝೊಹಾರ ಸೇರಿ ಮೂವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ5,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ 11,(1)(D) ಪ್ರಾಣಿ ಹಿಂಸೆ ಕಾಯಿದೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಮೂರು ದನಗಳನ್ನು ಆರೋಪಿ A-2 ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ತಂಚಿಬೆಟ್ಟು ನಿವಾಸಿ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯಲ್ಲಿ ಗೋಮಾಂಸ ಮಾಡುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ಉಳ್ಳಾದಲ್ಲಿರುವ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯನ್ನು ನವೆಂಬರ್ 4 ರಂದು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…