ಬೆಳ್ತಂಗಡಿ: ಉಜಿರೆಯ ಕೆಲವು ಲಾಡ್ಜ್ ಗಳಲ್ಲಿ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಫೆ.6 ರಂದು ರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸ್ ವರಿಷ್ಠಾಧಿಕಾರಿ( ಎಸ್.ಪಿ.) ಅಮಟೆ ವಿಕ್ರಮ್ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಅವರ ನೇತೃತ್ವದಲ್ಲಿ, ವಿಶೇಷ ತಂಡ ರಚಿಸಿ, ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು ಮತ್ತು ಸಿಬಂದಿಗಳ ತಂಡಗಳು ಏಕಕಾಲದಲ್ಲಿ ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ದಾಳಿ ಮಾಡಿದೆ.
ಇನ್ನು ರಿಜಿಸ್ಟರ್ ಗಳನ್ನು ಪರಿಶೀಲಿಸಿ, ಆಧಾರ್ ಕಾರ್ಡ, ಇತರೆ ದಾಖಲೆಗಳನ್ನು ಪರಿಶೀಲಿಸಿ, ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಮಾಹಿತಿ ಪಡೆದಿದೆ.
ಮುಂದಿನ ದಿನಗಳಲ್ಲಿ ಲಾಡ್ಜ್ ನಲ್ಲಿ ತಂಗುವ ಪ್ರವಾಸಿಗರು ಮತ್ತು ಬಕ್ತರು ಪೂರ್ಣ ಮಾಹಿತಿ ಪಡೆದು ರೂಮ್ ನೀಡಬೇಕು ಹಾಗೂ ಯಾವುದೇ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ನೀಡಬಾರದು ಎಂದು ಸೂಕ್ತ ಎಚ್ಚರಿಕೆ ನೀಡಿ ತೆರಳಿರುವುದಾಗಿ ವರದಿಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…