ಬೆಳ್ತಂಗಡಿ : ಅಪ್ಪ ಹಾಗೂ ಮಗನಿಂದ  ವ್ಯಕ್ತಿಯೊಬ್ಬನ ಬರ್ಬರ ಕೊಲೆ -Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ವ್ಯಕ್ತಿಯೊಬ್ಬನನ್ನು ರಾಡ್‌ನಿಂದ ಹೊಡೆದು, ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಾಂಧಿನಗರದಲ್ಲಿ ನಡೆದಿದ್ದು, ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊಲೆಯಾದ ವ್ಯಕ್ತಿಯನ್ನು ಉಮೇಶ ಸಮಗಾರ(50) ಎಂದು ಗುರುತಿಸಲಾಗಿದೆ.

ಉಮೇಶ್‌ ಮುಂಬೈಯಲ್ಲಿ ಉದ್ಯೋಗ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಊರಿಗೆ ಬಂದಿದ್ದರು ಎನ್ನಲಾಗಿದೆ. ಅಲ್ಲದೇ ಜಾಗದ ವಿಚಾರಕ್ಕಾಗಿ ಅಪ್ಪ ಹಾಗೂ ಮಗನಿಂದ ಉಮೇಶ್‌ ಕೊಲೆಯಾಗಿದೆ ಎನ್ನಲಾಗಿದೆ.

ಕೊಲೆ ಮಾಡಿದ ಆರೋಪಿಗಳನ್ನು ಯೋಗೀಶ್‌‌ ಹಾಗೂ ಜೀವನ್‌‌ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.