ಬೆಳ್ತಂಗಡಿ: ವ್ಯಕ್ತಿಯೊಬ್ಬನನ್ನು ರಾಡ್‌ನಿಂದ ಹೊಡೆದು, ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಾಂಧಿನಗರದಲ್ಲಿ ನಡೆದಿದ್ದು, ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೊಲೆಯಾದ ವ್ಯಕ್ತಿಯನ್ನು ಉಮೇಶ ಸಮಗಾರ(50) ಎಂದು ಗುರುತಿಸಲಾಗಿದೆ.
ಉಮೇಶ್ ಮುಂಬೈಯಲ್ಲಿ ಉದ್ಯೋಗ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಊರಿಗೆ ಬಂದಿದ್ದರು ಎನ್ನಲಾಗಿದೆ. ಅಲ್ಲದೇ ಜಾಗದ ವಿಚಾರಕ್ಕಾಗಿ ಅಪ್ಪ ಹಾಗೂ ಮಗನಿಂದ ಉಮೇಶ್ ಕೊಲೆಯಾಗಿದೆ ಎನ್ನಲಾಗಿದೆ.
ಕೊಲೆ ಮಾಡಿದ ಆರೋಪಿಗಳನ್ನು ಯೋಗೀಶ್ ಹಾಗೂ ಜೀವನ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…