ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳ್ತಂಗಡಿಯ 16 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿರುವ ಶುಭರಾಜ್ ಪುಸಲಾಯಿಸಿ, ಬಲವಂತವಾಗಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದ ಎಂದು ದೂರಲಾಗಿದೆ.
ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಆಕೆಯ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿದಾಗ ಬಾಲಕಿ ಗರ್ಭಿಣಿ ಎಂದು ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನ ಜು.18ರಂದು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಆರೋಪಿ ಶುಭರಾಜ್ ನನ್ನು ಲಾಯಿಲ ಗ್ರಾಮದ ಪುತ್ರಬೈಲಿನಲ್ಲಿ ಜು.19 ರಂದು ಸಂಜೆ ಬಂಧಿಸಿ ವಿಚಾರಣೆ ನಡೆಸಿ ಜು.20ರಂದು ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…