ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು

ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿಯ ಪುತ್ರಿ ರಮ (19) ಎಂಬಾಕೆ ಎ. 19 ರಂದು ರಾತ್ರಿ ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಚಿಕಿತ್ಸೆ ಫಲಿಸದೆ ರಮ ಎ.29 ರಂದು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ರಮ ವಾಮದಪದವು ಕಾಲೇಜ್ ನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಯುವಕನೊಬ್ಬನನ್ನು ಪ್ರೀತಿ ಮಾಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಧಿಸಿದಂತೆ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎ.30 ರಂದು ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Leave a Reply