Featured

ಬೆಳ್ತಂಗಡಿ  ಉತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ : ಅಮಿತಾನಂದ ಹೆಗ್ಡೆ ಮತ್ತು ರಾಧಾಕೃಷ್ಣ ಟಿ. ಆಯ್ಕೆ – Vishwanews24

ಬೆಳ್ತಂಗಡಿ  ಉತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ : ಅಮಿತಾನಂದ ಹೆಗ್ಡೆ ಮತ್ತು ರಾಧಾಕೃಷ್ಣ ಟಿ. ಆಯ್ಕೆ

ಬೆಳ್ತಂಗಡಿ: ರಾಜ್ಯ ಸರಕಾರ ನೀಡುವ 2022ನೇ ಸಾಲಿನ ಉತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಮಿತಾನಂದ ಹೆಗ್ಡೆ ಮತ್ತು ರಾಧಾಕೃಷ್ಣ ಟಿ.  ಆಯ್ಕೆಯಾಗಿದ್ದಾರೆ.

ಅಮಿತಾನಂದ ಹೆಗ್ಡೆ
ಬೆಳ್ತಂಗಡಿ: ಅಮಿತಾನಂದ ಹೆಗ್ಡೆ ಅವರು ಬಂಗಾಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ. ಉಜಿರೆ ಪಿಲಿಕುಂಜೆ ನಿವಾಸಿಯಾಗಿರುವ ಅವರು ಸ.ಹಿ.ಪ್ರಾ. ಶಾಲೆ ಉಪ್ಪಿನಂಗಡಿ, ಹಳೆಪೇಟೆ ಉಜಿರೆಯಲ್ಲಿ ಶಿಕ್ಷಕರಾಗಿ, ಸಮೂಹ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯಲ್ಲಿ ಸಮನ್ವಯ ಶಿಕ್ಷಣ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಭಾರತ್‌ ಸೌಟ್ಸ್‌ ಮತ್ತು ಗೈಡ್ಸ್‌ನ ಕಾರ್ಯದರ್ಶಿಯಾಗಿ ತಾಲೂಕಿನ ವಿವಿಧ ಕಡೆಗಳಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಮುದಾಯಕ್ಕಾಗಿ ವಿವಿಧ ಕಾರ್ಯಕ್ರಮಗಳು ಹಾಗೂ ಜಿಲ್ಲಾ ತಾಲೂಕು ಮಟ್ಟದ ಸಮಾವೇಶಗಳನ್ನು ಆಯೋಜಿಸಿದ್ದಾರೆ.

ಕಾರ್ಕಳ: ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಸಂಜೀವ ದೇವಾಡಿಗ – Vishwanews24

ರಾಧಾಕೃಷ್ಣ ಟಿ.
ಬೆಳ್ತಂಗಡಿ: ರಾಧಾಕೃಷ್ಣ ಟಿ. ಅವರು ಕೊಯ್ಯೂರು ಸರಕಾರಿ ಪ.ಪೂ. ಪ್ರೌಢ ಶಾಲಾ ವಿಜ್ಞಾನ ಶಿಕ್ಷಕರಾಗಿದ್ದಾರೆ. ಮೂಲತಃ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ತಚ್ಚಾಮೆ ನಿವಾಸಿಯಾಗಿರುವ ಅವರು ಪ್ರಸ್ತುತ ಬೆಳ್ತಂಗಡಿಯ ಕುತ್ಯಾರು ಬಳಿ ನೆಲೆಸಿದ್ದಾರೆ.

24 ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿರುವ ಅವರು ಕೊಯ್ಯೂರು ಪ್ರೌಢ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾಗಿ, ಬೆಳ್ತಂಗಡಿ ತಾಲೂಕು ವಿಜ್ಞಾನ ಶಿಕ್ಷಕರ ವೇದಿಕೆಯ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ವಿಜ್ಞಾನ ಶಿಕ್ಷಕರ ವೇದಿಕೆ ಅಧ್ಯಕ್ಷರಾಗಿ, ಬೆಳ್ತಂಗಡಿ ತಾಲೂಕು ಜೀವಜಲ ಮರುಪೂರಣ ತಾಲೂಕು ನೋಡಲ್‌ ಅಧಿಕಾರಿಯಾಗಿ, ರಾಷ್ಟ್ರೀಯ ಸೇವಾ ಯೋಜನೆಯ ಅನುಷ್ಠಾನ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ದ.ಕ. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, ಮೈಸೂರು ವಿಭಾಗ ಅತ್ಯುತ್ತಮ ವಿಜ್ಞಾನ ಕೇಂದ್ರ ಪ್ರಶಸ್ತಿ ಮಂಡ್ಯ ಜಿಲ್ಲೆ, ಜನ ಮೆಚ್ಚಿದ ಶಿಕ್ಷಕ ಪ್ರಶಸ್ತಿ ಮಂಡ್ಯ ಜಿಲ್ಲೆ ಸಹಿತ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಜತೆಗೆ ಜೀವ ವೈವಿಧ್ಯ ಸಂರಕ್ಷಣೆಯಡಿ ಅವನತಿಯಲ್ಲಿರುವ ಗಿಡಗಳನ್ನು ರಕ್ಷಿಸುವ ಮಹತ್ಕಾರ್ಯದಲ್ಲಿ ತೊಡಗಿದ್ದಾರೆ.

ನೌಕಾಪಡೆಯ ನೂತನ ಲಾಂಛನ, ಧ್ವಜ ಅನಾವರಣ ಮಾಡಿದ ಪ್ರಧಾನಿ ಮೋದಿ – Vishwanews24

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

16 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

17 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

17 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

17 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

17 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

18 hours ago