Featured

ಬೆಳ್ತಂಗಡಿ: ಎರಡು ಬೈಕ್‌ಗಳ ನಡುವೆ ಅಪಘಾತ ; ವಿದ್ಯಾರ್ಥಿ ಸಾವು, ಇಬ್ಬರು ಗಂಭೀರ ಗಾಯ – Vishwanews24

ಬೆಳ್ತಂಗಡಿ: ಎರಡು ಬೈಕ್‌ಗಳ ನಡುವೆ ಅಪಘಾತ ; ವಿದ್ಯಾರ್ಥಿ ಸಾವು, ಇಬ್ಬರು ಗಂಭೀರ ಗಾಯ

ಪುಂಜಾಲಕಟ್ಟೆ,: ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಆ. 29 ರ ಸೋಮವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಮುಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ.ಶಫೀಕ್ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ದ್ವಿತೀಯ ವರ್ಷದ ಬಿಬಿಎ ವಿದ್ಯಾರ್ಥಿಯಾಗಿದ್ದ.

ಇಂದು ಬೆಳಗ್ಗೆ ತನ್ನ ಬೈಕಿನಲ್ಲಿ ಕಾಲೇಜಿಗೆ ಹೊರಟಿದ್ದಾಗ ಪುಂಜಾಲಕಟ್ಟೆ ಮೇಲಿನ ಪೇಟೆ ಶಾರದಾ ಮಂಟಪದ ಬಳಿ ತಲುಪಿದಾಗ ಅವರ ಬೈಕ್ ಮತ್ತು ಮಂಡತ್ಯಾರ್ ತರಕಾರಿ ಅಂಗಡಿಯ ಕೆಲಸಗಾರರಿಬ್ಬರು ಸಂಚರಿಸುತ್ತಿದ್ದ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದೆ. ಈ ವೇಳೆ ರಸ್ತೆಗೆಸೆಯುಲ್ಪಟ್ಟು ಗಂಭೀರ ಗಾಯಗೊಂಡಿದ್ದ ಮುಹಮ್ಮದ್ ಶಫೀಕ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇನ್ನೊಂದು ಬೈಕಿನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರು ವರ್ಷ ಪೂರೈಸಿದ ನಳಿನ್‌ ..

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

10 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

10 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

10 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

11 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

11 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

11 hours ago