ಬೆಳ್ತಂಗಡಿ:ಖಾಸಗಿ ಕಾಲೇಜೊಂದರಲ್ಲಿ ನೀಟ್ ಓದಲು ಬಂದಿದ್ದ ವಿದ್ಯಾರ್ಥಿನಿಯೊಬ್ಬಳು ಕಡಿಮೆ ಅಂಕ ಬಂದಿದ್ದರಿಂದ ನೊಂದು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಏ. 28ರಂದು ನಡೆದಿದೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ನಿವಾಸಿಯಾದ ಉಮೆ ಉಜ್ಮಾ.ಎಸ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಬೆಳ್ತಂಗಡಿಯ ಕುವೆಟ್ಟು ಸಮೀಪದ ಖಾಸಗಿ ಕಾಲೇಜಿನಲ್ಲಿ ಮೆಡಿಕಲ್ ಕೋರ್ಸ್ ಪ್ರವೇಶ ಪಡೆಯಲು ಲಾಂಗ್ ಟರ್ಮ್ ನೀಟ್ ಓದುತ್ತಿದ್ದು, ಇಲ್ಲಿಯ ಕಾಲೇಜು ಹಾಸ್ಟೆಲ್ ನಲ್ಲಿ ವಾಸವಾಗಿದ್ದಳು. ಏ.28ರಂದು ಉಮೆ ತನ್ನ ಕೊಠಡಿಯಿಂದ ಹೊರಗೆ ಹೋಗಿ ಕಟ್ಟಡದ ಮೇಲಿನಿಂದ ಜಿಗಿದಿದ್ದಾಳೆ. ಈ ಹಿಂದೆ ನಡೆದ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ವಿಚಾರವಾಗಿ ಅಥವಾ ಮುಂಬರುವ ನೀಟ್ ಪರೀಕ್ಷೆ ಎದುರಿಸುವ ಆತಂಕದಿಂದ ಉಮೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…