Featured

ಬೆಳ್ತಂಗಡಿ: ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ – ಪ್ರಕರಣ ದಾಖಲು — vishwanews24

ಬೆಳ್ತಂಗಡಿ: ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ – ಪ್ರಕರಣ ದಾಖಲು

ಬೆಳ್ತಂಗಡಿ : ಸರಕಾರಿ ಕರ್ತವ್ಯದ ವೇಳೆ ಅಡ್ಡಿಪಡಿಸಿದ್ದಲ್ಲದೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ಜ.18 ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಕಂದಾಯ ನಿರೀಕ್ಷಕರು, ಗ್ರಾಮ ಅಭಿವೃದ್ಧಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು.

ಈ ಸ್ಥಳವನ್ನು ಒತ್ತುವರಿಸಿದ ನಸೀರ್‌ ಮತ್ತು ರೌಫ್‌ ಎಂಬವರುಗಳು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿರುತ್ತಾರೆ ಹಾಗೂ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕರ ಪ್ರತೀಶ್ ಗೆ ಅವಾಚ್ಯ ಶಬ್ದಗಳಿಂದ ಬೈದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೀಡಿದ ದೂರಿನ ಮೇರೆಗೆ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

10 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

10 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

11 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

11 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

11 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

11 hours ago