ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದನವನ್ನು ಸಾಗಾಟ ಮಾಡುತ್ತಿದ್ದ ವಾಹನದಲ್ಲಿದ್ದ ಒಬ್ಬನಿಗೆ ಸ್ಥಳದಲ್ಲಿದ್ದವರು ಹಲ್ಲೆ ನಡೆಸಿರುವುದಾಗಿಯೂ ತಿಳಿದು ಬಂದಿದೆ.
ಚಾರ್ಮಾಡಿ ಕಡೆಯಿಂದ ಅತಿ ವೇಗದಲ್ಲಿ ಬಂದ ಇನ್ನೋವಾ ಕಾರು ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದ್ದು, ಗುರುವಾಯಕೆರೆಯಲ್ಲಿ ವಾಹನವನ್ನು ಸ್ಥಳೀಯರು ಹಾಗೂ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಸಿಕ್ಕಿಬಿದ್ದವನ ಮೇಲೆ ಹಲ್ಲೆ ಮಾಡಲಾಗಿದೆ ತಿಳಿದು ಬಂದಿದೆ.
ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಾಟ ಮಾಡಲಾಗುತ್ತಿತ್ತು. ಕಾರಿಗೆ ನಕಲಿ ನಂಬರ್ ಪ್ಲೇಟ್ ಅಂಟಿಸಿರುವುದು ಕಂಡುಬಂದಿದೆ. ಘಟನೆಯ ವೇಳೆ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…