Featured

ಬೆಳ್ತಂಗಡಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ; ಚಿಕಿತ್ಸೆಗೆ ಸ್ಪಂದಿಸದೆ ಸವಾರ ಮೃತ್ಯು – vishwanews24

ಬೆಳ್ತಂಗಡಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ; ಚಿಕಿತ್ಸೆಗೆ ಸ್ಪಂದಿಸದೆ ಸವಾರ ಮೃತ್ಯು

ಬೆಳ್ತಂಗಡಿ : ಕನ್ಯಾಡಿ ಸೇವಾ ಧಾಮದ ಸಮೀಪದ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಅಸ್ಪತ್ರೆಯಲ್ಲಿ ಸಾವನ್ನಪ್ಪಿದ ದುರ್ಘಟನೆ ಅಕ್ಟೋಬರ್ 29ರಂದು ನಡೆದಿದೆ.

ನಾವೂರು ಗ್ರಾಮದ ಹೊಡಿಕ್ಕಾರು ಗಂಗಯ್ಯ ಎಂಬವರ ಪುತ್ರ, ಬೈಕ್ ಸವಾರ ಚಂದ್ರಹಾಸ (28) ಮೃತರು ಎಂದು ಗುರುತಿಸಲಾಗಿದೆ. ಚಂದ್ರಹಾಸ ಅವರು ಸತೀಶ್ ಎಂಬವರ ಜತೆ ಸೇರಿ ಟೈಲ್ಸ್ ಹಾಕುವ ಕೆಲಸವನ್ನು ಮಾಡಿಕೊಂಡು ಜೀವನ ನಿರ್ವಹಿಸುತ್ತಿದ್ದರು. ಅ.29ರಂದು ಬೆಳಿಗ್ಗೆ ಧರ್ಮಸ್ಥಳ ಕಡೆ ಕೆಲಸಕ್ಕಾಗಿ ತನ್ನ ಬೈಕ್‌ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಇಲ್ಲಿಯ ಸೇವಾ ಧಾಮದ ಸಮೀಪ ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಬೈಕ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಚಂದ್ರಹಾಸ್ ಅವರ ತಲೆ ಹಾಗೂ ಕಾಲಿಗೆ ಏಟು ತಗಲಿ ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು .ಅಲ್ಲಿ ಅವರ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

21 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

22 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

22 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

22 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

22 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

23 hours ago