Featured

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ರೋಚಕ ತಿರುವು – vishwanews24

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ರೋಚಕ ಟ್ವಿಸ್ಟ್

ಬೆಳ್ತಂಗಡಿ: ಮಂಗಳೂರಿನ ಕಾಲೇಜು ಸೇರಲು ಕಿಟ್ರ್ಯಾಪ್ ಡ್ರಾಮಾ ಸೃಷ್ಟಿಸಿದ ಕಾಲೇಜು ಕನೈಯ ನಾಟಕ ಪೊಲೀಸ್ ತನಿಖೆಯಲ್ಲಿ ಬದಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸೋಮವಾರ ನಡೆದಿದೆ ಎನ್ನಲಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯ ಕಿಡ್ನಾಪ್ ಯತ್ನ ಪ್ರಕರಣ ಎಲ್ಲರನ್ನೂ ಆತಂಕಕ್ಕೆ ದೂಡಿತ್ತು. ಮೂವರು ಕಾರಿನಲ್ಲಿ ಬಂದು ಕಿಟ್ರ್ಯಾಪ್‌ಗೆ ಯತ್ನಿಸಿದ್ದಲ್ಲದೆ, ಕೈಗೆ ಚೂರಿಯಿಂದ ಇರಿದಿದ್ದಾರೆ. ಅದೇ ಸಂದರ್ಭ ಯಾರೋ ವ್ಯಕ್ತಿಯೋರ್ವರು ಬಂದಿದ್ದರಿಂದ ಅಪಹರಣಕಾರರು ತನ್ನನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದರು ಎಂದು ಯುವತಿ ಹೇಳಿಕೆ ನೀಡಿದ್ದಳು.
ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯನ್ನು ಭೇಟಿಯಾಗಲು ಶಾಸಕ ಹರೀಶ್ ಪೂಂಜಾ ಕೂಡ ದೌಡಾಯಿಸಿ ಮಾತುಕತೆ ನಡೆಸಿದ್ದರು. ಬೆಳ್ತಂಗಡಿ ಪೊಲೀಸರಲ್ಲದೆ, ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರಿನಿಂದ ದೌಡಾಯಿಸಿದ್ದರು. ನಿನ್ನೆ ಇಡೀ ದಿನ ಪೊಲೀಸರು ಈ ಬಗ್ಗೆ ಕಣ್ಣಿಗೆ ಎಣ್ಣೆ ಬಿಟ್ಟು ಕಾರ್ಯಾಚರಣೆ ನಡೆಸಿದ್ದರು.

ಪೊಲೀಸರು ತನಿಖೆ ಚುರುಕುಗೊಳಿಸುತ್ತಿದ್ದಂತೆ ಬಾಲಕಿಯ ಕಿಟ್ರ್ಯಾಪ್ ಡ್ರಾಮಾ ಬಯಲಿಗೆ ಬಂದಿದ್ದು, ಆಕೆಯ ಬಾಯಿಂದಲೇ ಕಟ್ಟುಕತೆ ಬಯಲಾಗಿದೆ. ಆಕೆಗೆ ಮಂಗಳೂರಿನಲ್ಲಿರುವ ಪಿಯುಸಿ ಕಾಲೇಜು ಸೇರ್ಪಡೆಯಾಗಬೇಕಿತ್ತು. ಆದರೆ ಮನೆಯವರು ಬೆಳ್ತಂಗಡಿಯಲ್ಲೇ ಕಾಲೇಜಿಗೆ ಸೇರಿಸಿದ್ದರು.
ಆದ್ದರಿಂದ ಕಿಟ್ರ್ಯಾಪ್ ಡ್ರಾಮಾ ಮಾಡಿದ್ದಲ್ಲಿ ಮನೆಯವರು ಮಂಗಳೂರಿನ ಪಿಯುಸಿ ಕಾಲೇಜಿಗೆ ಸೇರಿಸುತ್ತಾರೆ ಅನ್ನುವ ಸ್ಕ್ಯಾನ್ ಮಾಡಿದ್ದಳು.
ಅದಕ್ಕಾಗಿ ಆಕೆ ತಾನೇ ಕಿಟ್ರ್ಯಾಪ್ ಡ್ರಾಮಾ ಸೃಷ್ಟಿಸಿದ್ದಳು. ಬ್ಯಾಗ್‌ನಲ್ಲಿರೋ ಪುಸ್ತಕಗಳನ್ನು ಮನೆಯಲ್ಲೇ ಸುಟ್ಟು ಹಾಕಿದ್ದಳು. ಶಾಲಾ ಬ್ಯಾಗ್ ಅನ್ನು ದಾರಿಯಲ್ಲೇ ಬಿಸಾಕಿದ್ದಳು. ವಿದ್ಯಾರ್ಥಿನಿ ಸ್ಕೂಟಿಯನ್ನು ನಿಲ್ಲಿಸಿ ಬೇಡ್‌ನಿಂದ ಕೈ ಕುಯ್ದುಕೊಂಡು ನಾಟಕ ಮಾಡಿದ್ದಳು. ಒಟ್ಟಿನಲ್ಲಿ ಕಾಲೇಜು ಕನೈಯ ನಾಟಕಕ್ಕೇ ಪೊಲೀಸರೇ ಸುಸ್ತುಬೀಳುವಂತಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

20 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

21 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

21 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

24 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago