ಮಂಗಳೂರು : ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮೂವರು ಯುವಕರು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿಯಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎಂದಿನಂತೆ ಸೋಮವಾರ ಬೆಳಿಗ್ಗೆ 8:30ರ ಸುಮಾರಿಗೆ ತನ್ನ ಸ್ಕೂಟರ್‌ನಲ್ಲಿ ಸಂತೆಕಟ್ಟೆ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಸ್ಕೂಟರ್ ಅನ್ನು ಅಡ್ಡಗಟ್ಟಿದ್ದಾರೆ. ಕಾರಿನ ನಂಬರ್ ಪ್ಲೇಟ್ ಗೆ ಬಟ್ಟೆ ಕಟ್ಟಿದ್ದು ಅದರಲ್ಲಿ ಮೂವರು ದುಷ್ಕರ್ಮಿಗಳು ಕೂಡ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದರೆಂದು ತಿಳಿದುಬಂದಿದೆ. ಬಾಲಕಿಯನ್ನು ಕಾರಿನ ಒಳಗೆ ಎಳೆಯಲು ಯತ್ನಿಸಿದಾಗ, ಬೊಬ್ಬೆ ಹೊಡೆದು ವಿರೋಧ ವ್ಯಕ್ತಪಡಿಸಿದ್ದಾಳೆ. ಇದೇ ವೇಳೆ, ಹಿಂಭಾಗದಿಂದ ಸ್ಕೂಟರ್ ಬರುವುದನ್ನು ನೋಡಿ ದುಷ್ಕರ್ಮಿಗಳು ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಯುವತಿಯ ಕೈಗೆ ಮತ್ತು ಬೆರಳಿಗೆ ಚೂರಿಯಿಂದ ಚುಚ್ಚಿದ ಗಾಯವಾಗಿದ್ದು ಕಾಲೇಜು ಬ್ಯಾಗ್ ನೊಂದಿಗೆ ಯುವಕರು ಕಾರಿನಲ್ಲಿ ಪರಾರಿಯಾಗಿದ್ದಾರೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಆಗಮಿಸಿ ವಿದ್ಯಾರ್ಥಿನಿ ಬಳಿಯಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…