Featured

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ; ಯುವಕನ ವಿರುದ್ಧ ದೂರು ದಾಖಲು – vishwanews24

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ; ಯುವಕನ ವಿರುದ್ಧ ದೂರು ದಾಖಲು

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು , ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಯುವಕನೊಬ್ಬ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಬಳಿಕ ಯುವಕ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಿದ್ದಾರೆ.

ಪ್ರಕರಣದ ವಿವರ: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ನಿವಾಸಿ 17 ವರ್ಷದ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಚಾರ್ಮಾಡಿ ಗ್ರಾಮದ ಪ್ರವೀಣ್ ಗೌಡ ಎಂಬಾತ ಸಾಮಾಜಿಕ ಜಾಲತಾಣದ ಮುಖಾಂತರ ಪರಿಚಯ ಮಾಡಿಕೊಂಡಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದ. ವಿದ್ಯಾರ್ಥಿನಿಯು ತನ್ನನ್ನು ಪ್ರವೀಣ್ ಜೊತೆ ಮದುವೆ ಮಾಡಿಕೊಡಿ ಎಂದು ತಾಯಿಯೊಂದಿಗೆ ಹೇಳಿದ್ದಳು.

ಯುವಕ ಆಕೆಯ ಜೊತೆ ಸುತ್ತಾಡಿ ಫೋಟೋ ತೆಗೆಸಿಕೊಂಡಿದ್ದ. ಬಳಿಕ ಏಕಾಏಕಿ ನಾನು ನಿನ್ನನ್ನು ಮದುವೆಯಾಗಲ್ಲ. ಸಾಯುವುದಾದರೆ ಸಾಯಿ. ಎಂದು ಹೇಳಿ ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ನೊಂದ ವಿದ್ಯಾರ್ಥಿನಿ ನ.20 ರಂದು ರಾತ್ರಿ ಮನೆಯಲ್ಲಿ ಅಂಗಡಿಯಿಂದ ತಂದಿದ್ದ ಇಲಿಪಾಷಣ ಪೇಸ್ಟ್ ಸೇವಿಸಿದ್ದಾಳೆ ಎನ್ನಲಾಗಿದೆ.

ವಿಚಾರ ತಿಳಿದ ಕೂಡಲೇ ಆಕೆಯನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಮನೆಮಂದಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ನ.26 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ವಿದ್ಯಾರ್ಥಿನಿ ತಾಯಿ ಚಾರ್ಮಾಡಿ ಗ್ರಾಮದ ಮರಂಗಾಯಿ ನಿವಾಸಿ ಪ್ರವೀಣ್ (22) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರಂತೆ ಬೆಳ್ತಂಗಡಿ ಪೊಲೀಸರು‌ BNS 2023 (u/s-107) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಯುವಕ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪ್ರಕರಣದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾನೆ. ಆತನ ಬಂಧನಕ್ಕೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಳೆದ ಏಂಟು ತಿಂಗಳ ಹಿಂದೆ ವಿದ್ಯಾರ್ಥಿನಿ ಹಾಗೂ ಯುವಕನ ನಡುವೆ ಇನ್ಟಾಗ್ರಾಂ ಮೂಲಕ ಪರಿಚಯವಾಗಿದೆ‌. ಬಳಿಕ ಮದುವೆಯಾಗುವುದಾಗಿ ವಿದ್ಯಾರ್ಥಿನಿಗೆ ಯುವಕ ಕೊರಗಜ್ಜನ ಮೇಲೆ ಪ್ರಮಾಣ ಮಾಡಿ ಹೇಳಿದ್ದ ಎನ್ನಲಾಗಿದೆ. ಈ ವಿಚಾರವನ್ನು ತನ್ನ ತಾಯಿ ಜೊತೆ ಮೂರು ತಿಂಗಳ ಹಿಂದೆ ವಿದ್ಯಾರ್ಥಿನಿ ತಿಳಿಸಿದ್ದಾಳೆ. ನನಗೆ ಆತನ ಜೊತೆ ಮದುವೆ ಮಾಡಿಕೊಡಿ ಎಂದು ತಾಯಿ ಬಳಿ ಕೇಳಿದ್ದಾಳೆ.ಈ ವಿಚಾರವಾಗಿ ತಾಯಿ ನಿನಗೆ ವಯಸ್ಸು ಆಗಿಲ್ಲ ನಿನ್ನ ವಿದ್ಯಾಭ್ಯಾಸ ಮುಗಿದ ಬಳಿಕ ಮದುವೆ ಮಾಡುವ ಎಂದು ಬುದ್ದಿ ಮಾತು ಹೇಳಿದ್ದಾರೆ‌. ಯುವಕನ ಜೊತೆ ತಾಯಿಗೆ ಮಾತನಾಡಲು ಮಗಳು ಹೇಳಿದ್ದರಿಂದ ಎರಡು ಬಾರಿ ಮೊಬೈಲ್ ನಲ್ಲಿ ಮಾತಾನಾಡಿದ್ದು ವಯಸ್ಸು ಆಗಲಿ ಆಮೇಲೆ ಮದುವೆ ಮಾಡುವ ಎಂದಿದ್ದಾರೆ. ಅದಕ್ಕೆ ತಾಯಿ ಓಕೆ ಅಂದು ಸುಮ್ಮನಿದ್ದರು. ಬಳಿಕ ಇವರಿಬ್ಬರು ದೇವಸ್ಥಾನ, ಇತರ ಕಡೆ ರಜೆ ಸಮಯದಲ್ಲಿ ತಿರುಗಾಡಿದ್ದಾರೆ ಅದಕ್ಕೆ ಸಾಕ್ಷಿಯಂತೆ ಜೊತೆಯಲ್ಲಿ ಸೆಲ್ಫಿ, ಫೋಟೋ ಕೂಡ ತೆಗೆದುಕೊಂಡಿದ್ದಾರೆ.‌ ಇದು ಮೊಬೈಲ್ ನಲ್ಲಿದೆ. ಮೃತಪಟ್ಟ ವಿದ್ಯಾರ್ಥಿನಿಯ ತಾಯಿ ಹೇಳುವ ಪ್ರಕಾರ ಮಗಳ ಹುಟ್ಟುಹಬ್ಬ ಕಳೆದ ತಿಂಗಳು 23 ರಂದು ಇದ್ದು ,ಈ ವೇಳೆ ಯುವಕ ಮಗಳ ಫೋಟೋ ಸ್ಟೇಟಸ್ ಹಾಕಿ ಶುಭಾಶಯ ಸಲ್ಲಿಸಿದ್ದ. ಅದನ್ನು ಆತನ ಸಂಬಂಧಿಗಳು ನಮ್ಮ ದಿಡುಪೆಯಲ್ಲಿದ್ದು ಅವರು ನೋಡಿದ್ದಾರೆ. ಅವರು ಬಡ ಕುಟುಂಬದ ಸಂಬಂಧ ಬೇಡ ಅಂತ ಯುವಕನ ಮನೆಯವರಲ್ಲಿ ಹೇಳಿ ಸಂಬಂಧ ಮುರಿಯುವಂತೆ ಮಾಡಿದ್ದಾರೆ. ಹಾಗಾಗಿ ಯುವಕ ಮಗಳ ಜೊತೆ ಮದುವೆಯಾಗುವುದಿಲ್ಲ ಎಂದು ಕಳೆದ 20 ದಿನದ ಹಿಂದೆ ಹೇಳಿದ್ದ ಎಂದಿದ್ದಾರೆ

ವಿದ್ಯಾರ್ಥಿನಿ ಮೊಬೈಲ್ ನಲ್ಲಿದೆ ನಿಗೂಢ ರಹಸ್ಯಗಳು: ಇನ್ನೂ ವಿದ್ಯಾರ್ಥಿನಿ ಆತ್ಮಹತ್ಯೆ ಬಳಿಕ ಮನೆಮಂದಿ ಆಕೆಯ ಬಳಿಯಿಂದ ಮೊಬೈಲ್ ಪರಿಶೀಲನೆ ಮಾಡಿದ್ದು ಈ ವೇಳೆ ಅನೇಕ ಇಬ್ಬರ ನಡುವೆ ನಡೆದ ಮೆಸೇಜ್, ವಿಡಿಯೋ ಕರೆ ಮಾಡಿದ ಚಾಟ್ ಲಿಸ್ಟ್ ,ತಿರುಗಾಡಿದ ಫೋಟೋಗಳು ಹಾಗೂ ಇನ್ನಿತರ ವಿಚಾರಗಳು ಪತ್ತೆಯಾಗಿದೆ. ವಿದ್ಯಾರ್ಥಿನಿ ಜೊತೆ ಯುವಕ ನ.25 ದವರೆಗೂ ಸಂಪರ್ಕದಲ್ಲಿದ್ದು ಮೆಸೇಜ್ ಮೂಲಕ ಮಾತಾನಾಡಿದ್ದಾರೆ. ಈ ವೇಳೆ ನನಗೆ ನೀನು ಬೇಕು ,ನನ್ನಿಂದ ನಿನ್ನನ್ನು ಮರೆತುಬೀಡಲು ಸಾಧ್ಯವಾಗುತ್ತಿಲ್ಲ, ನನ್ನನ್ನು ಮದುವೆಯಾಗು ಎಂದು ವಿದ್ಯಾರ್ಥಿನಿ ಗೋಳಾಡಿದ್ದಾಳೆ ಇದೆಲ್ಲ ಮೆಸೇಜ್ ಹಾಗೆಯೇ ಮೊಬೈಲ್ ನಲ್ಲಿದೆ. ಇದೀಗ ನನ್ನ ಮಗಳ ಸಾವಿಗೆ ನ್ಯಾಯ ಬೇಕು ಅಂತಾ ವಿದ್ಯಾರ್ಥಿನಿ ತಾಯಿ ಕಣ್ಣೀರು ಹಾಕುತ್ತಿದ್ದಾರೆ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

18 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

20 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

20 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

21 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

21 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

21 hours ago