ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ. ರಸ್ತೆಯಲ್ಲಿ ನಡೆದಿದೆ.
ಬಂಧಿತರನ್ನು ಕ್ಯಾಂಟೀನ್ ಮಾಲೀಕ ಸುಂದರ್ ಶೆಟ್ಟಿ(55) ಹಾಗೂ ಗ್ರಾಹಕರಾದ ಉಸ್ಮಾನ್(38) ಮತ್ತು ಹೈದರ್(45) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ :
ಕೆ.ಇ.ಬಿ. ರಸ್ತೆಯಲ್ಲಿರುವ ‘ಪವನ್ ಕ್ಯಾಂಟೀನ್’ ಮೇಲೆ ಪೊಲೀಸರು ಹಠಾತ್ ದಾಳಿ ನಡೆಸಿದ್ದಾರೆ. ಸರ್ಕಾರಿ ಜಾಗದಲ್ಲಿ ಈ ಕ್ಯಾಂಟಿನ್ ಅನ್ನು ಕಳೆದ 20 ವರ್ಷಗಳಿಂದ ಕ್ಯಾಂಟೀನ್ ಮಾಲೀಕ ಸುಂದರ್ ಶೆಟ್ಟಿ ನಡೆಸುತ್ತಿದ್ದರು.
ಪವನ್ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸರು ಈ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ 29 ವರ್ಷದ ಮಹಿಳೆಯೊಬ್ಬರನ್ನು ರಕ್ಷಿಸಲಾಗಿದ್ದು, ಘಟನಾ ಸ್ಥಳದಿಂದ 5,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…