ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಸ್ಟೀಪನ್ (14) ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ.
ಕ್ರಿಸ್ ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಾಕ್ಲಾಸ್ ಬರುವ ಹಿನ್ನೆಲೆಯಲ್ಲಿ ಮನೆಗೆ ಆಲಂಕಾರ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಬಂದರೂ ಅಷ್ಟೊತ್ತಿಗಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತ ವಿದ್ಯಾರ್ಥಿಯ ತಂದೆ ಹಾಗೂ ತಾಯಿ ಕೆಲವು ವರ್ಷಗಳ ಹಿಂದೆ ಮೃತ ಪಟ್ಟಿದ್ದರು. ಈತ ಅಜ್ಜಿ ಮನೆಯಲ್ಲಿದ್ದು ಶಿಕ್ಷಣ ಪಡೆಯುತ್ತಿದ್ದ. ಇಂದು ಶಾಲೆಗೆ ರಜೆ ಮಾಡಿ ಮನೆಯಲ್ಲಿ ಅಲಂಕಾರ ಮಾಡುತ್ತಿದ್ದ ಎನ್ನಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…