ಬೆಳ್ತಂಗಡಿ : ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ. ತಮಿಳುನಾಡು ಮೂಲದ ಮಹಾಲಿಂಗಂ ಮೃತ ವ್ಯಕ್ತಿ.
ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ವಾಸವಾಗಿದ್ದ ಇವರು ಉಪ್ಪಿನಂಗಡಿ ಕಡೆಯಿಂದ ಪಿಲಿಗೂಡು ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಗುರುವಾಯನಕೆರೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ, ಕ್ರೇನ್ ಒಂದು ಚಾಲಕನ ನಿಯಂತ್ರಣ ತಪ್ಪಿ ಇವರಿಗೆ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ತೀವ್ರತೆಗೆ ಮಹಾಲಿಂಗಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಅವರ ಪುತ್ರ ಸುದಿನ್ ಎಂಬವರು ಪುತ್ತೂರು ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…