ಬೆಳ್ತಂಗಡಿ: ತಾಲೂಕಿನ ಗಡಾಯಿಕಲ್ಲು ಚಾರಣ ಗುರುವಾರದಿಂದ ಮುಕ್ತವಾಗಲಿದೆ. ಈ ಬಾರಿ ಜೂ. 1ರಿಂದ ಚಾರಣಕ್ಕೆ ಅವಕಾಶ ನೀಡಲಾಗಿತ್ತು. ಬಳಿಕ ತಾಂತ್ರಿಕ ಕಾರಣಗಳಿಂದ ನಿರ್ಬಂಧ ವಿಧಿಸಲಾಗಿತ್ತು. ಇದೀಗ ತಾಂತ್ರಿಕ ಸಮಸ್ಯೆ ಸರಿಪಡಿಸಿ ಕುದುರೆಮುಖ ವನ್ಯಜೀವಿ ವಿಭಾಗದಿಂದ ಮತ್ತೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
ಗಡಾಯಿಕಲ್ಲು ಚಾರಣಕ್ಕೆ ತೆರಳುವ ಪ್ರತಿಯೊಬ್ಬರೂ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಅಧಿಕೃತ ವೆಬ್‌ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ. ಪ್ರತಿದಿನ ಗರಿಷ್ಠ 500 ಮಂದಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ಸುರಕ್ಷೆ ದೃಷ್ಟಿಯಿಂದ ಮಿತಿ ವಿಧಿಸಲಾಗಿದೆ. ಚಾರಣಿಗರಿಗೆ ಬೆಳಗ್ಗೆ 7ರಿಂದ ಅಪರಾಹ್ನ 1ರ ವರೆಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ ಎಂದು ವನ್ಯಜೀವಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಗುರುತಿನ ಚೀಟಿ, ಶುಲ್ಕ ಕಡ್ಡಾಯ
ಪ್ರವೇಶದ ವೇಳೆ ಫೋಟೋ, ವಿಳಾಸ ಹಾಗೂ ಜನ್ಮ ದಿನಾಂಕ ಹೊಂದಿರುವ ಸರಕಾರದ ಮಾನ್ಯತೆ ಪಡೆದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿ ಸಬೇಕು. ಅಲ್ಲದೆ, ಪ್ರತಿ ವ್ಯಕ್ತಿಗೆ 50 ರೂ. ಪ್ರವೇಶ ಶುಲ್ಕವನ್ನು ಆಫ್‌ಲೈನ್ ಮೂಲಕ ಪಾವತಿಸಬೇಕಾಗಿದೆ. ಮಳೆಗಾಲದಲ್ಲಿ ಮೆಟ್ಟಿಲುಗಳು ಹಾಗೂ ಕಲ್ಲುಗಳು ಜಾರುವ ಸಾಧ್ಯತೆ ಇರುವುದರಿಂದ ಚಾರಣಿಗರು ಎಚ್ಚರಿಕೆ ವಹಿಸಬೇಕಾಗಿದ್ದು, ಪ್ಲಾಸ್ಟಿಕ್ ವಸ್ತು, ಮದ್ಯಪಾನ, ಧೂಮಪಾನ ನಿಷೇಧಿಸಲಾಗಿದೆ.
ಚಾರಣಿಗರಿಗೆ ತೊಂದರೆ ಆಗಬಾರದೆಂದು 500 ಮಂದಿಯ ಮಿತಿ ಮಾಡಿದ್ದೇವೆ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್‌ಎಫ್‌ಒ ಶರ್ಮಿಷ್ಟಾ ತಿಳಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…