Featured

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚರಿಸುವ ವಾಹನಗಳಿಗೆ ಹೊಸ ನಿಯಮ ಜಾರಿ vishwanews24

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಹೊಸ ನಿಯಮ ಜಾರಿ; ರಾತ್ರಿ ಸಂಚರಿಸುವ ವಾಹನಗಳ ತಪಾಸಣೆ ಕಡ್ಡಾಯ

ಬೆಳ್ತಂಗಡಿ: ಚಿಕ್ಕಮಗಳೂರು ಮತ್ತು ಕರಾವಳಿಯ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಹೊಸ ನಿಯಮಗಳು ಜಾರಿಯಾಗಲಿವೆ. ರಾತ್ರಿ ವೇಳೆ ಚೆಕ್‌ಪೋಸ್ಟ್ ಮೂಲಕ ಸಾಗುವ ಎಲ್ಲ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ ಸಂಚರಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿದುಬಂದಿದೆ.

ಘಾಟಿಯಲ್ಲಿ ರಾತ್ರಿ ವೇಳೆ ಗೋ ಕಳ್ಳತನ ಹಾಗೂ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಹೊಸ ನಿಯಮ ಜಾರಿಗೆ ತರಲು ಮುಂದಾಗಿದ್ದಾರೆ. ರಾತ್ರಿ ವೇಳೆ ವಾಹನಗಳು ಕೊಟ್ಟಿಗೆಹಾರ ಚೆಕ್‌ಪೋಸ್ಟ್ ದಾಟಬೇಕಾದರೆ ಸಂಪೂರ್ಣ ತಪಾಸಣೆಗೊಂಡು ಐದು ವಾಹನಗಳು ಒಟ್ಟಾಗಿ ತೆರಳುವಂತೆ ನಿಯಮ ರೂಪಿಸಲಾಗಿದೆ.

ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಈಗಿರುವ ಬ್ಯಾರಿಕೇಡ್ ಬದಲಾಗಿ ಹೊಸ ಭೂಮ್ ಬ್ಯಾರಿಯರ್ ನಿರ್ಮಿಸಿ ರಾತ್ರಿ ವೇಳೆ ಓರ್ವ ಪಿಎಸ್‌ಐ ನೇತೃತ್ವದಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಒಂದೂವರೆ ಕಿ.ಮೀ. ರಸ್ತೆಯನ್ನು ಗೋ ಕಳ್ಳರು ದುರುಪಯೋಗ ಮಾಡುತ್ತಿದ್ದರು ಎನ್ನುವ ದೂರುಗಳಿದ್ದವು. ಅಲ್ಲಿ ಕೆಲವು ಮನೆಗಳಿದ್ದು, ಸ್ಥಳೀಯರ ಜತೆ ಮಾತುಕತೆ ನಡೆಸಿ ಆ ರಸ್ತೆಯಲ್ಲಿ ಗೇಟ್ ನಿರ್ಮಿಸಲು ನಿರ್ಧರಿಸಲಾಗಿದೆ. ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಈ ಗೇಟ್ ಬಂದ್ ಮಾಡಲಾಗುತ್ತದೆ. ಇನ್ನು ಗೋಕಳ್ಳತನ ಸಹಿತ ಅಪರಾಧ ಕೃತ್ಯಗಳನ್ನು ತಡೆಯಲು ಎಸ್ಪಿ ಡಾ| ವಿಕ್ರಮ್ ಅಮಟೆ ಅವರು ಈ ಯೋಜನೆ ರೂಪಿಸಿದ್ದಾರೆ.

Vishwa News 24

Recent Posts

ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ ವೀಕೆಂಡ್ ಟೂರ್ ಪ್ಯಾಕೇಜ್, ವಿಶೇಷ ಶೀಘ್ರ ದರ್ಶನ – vishwanews24

ವೀಕೆಂಡ್‌ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್‌ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…

1 day ago

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ , ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…

1 day ago

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ – vishwanews24

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…

1 day ago

ಜನರ ಕೋಪ ನೋಡಿದರೆ ಮುಂದಿನ ಚುನಾವಣೆಯನ್ನು ನಾವು ಈಗಾಗಲೇ ಗೆದ್ದಿದ್ದೇವೆ: ರಾಹುಲ್ ಗಾಂಧಿ – vishwanews24

ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…

1 day ago

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ – vishwanews24

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…

1 day ago

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20 ರೂ. ಹೆಚ್ಚಳ – vishwanews24

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…

1 day ago