ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಗುಡ್ಡ ಏರಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ವ್ಯಾಪ್ತಿಯ ಚಿಬಿದ್ರೆಯ ಕಾಪು ಚಡಾವು ಎಂಬಲ್ಲಿ ಭಾನುವಾರ ನಡೆದಿದೆ. ಈ ಅವಘಡದಲ್ಲಿ 17 ಮಂದಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಬೆಂಗಳೂರು ಮೂಲದ ವೆಂಕಟಸ್ವಾಮಪ್ಪ (45) ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಗಾಯಾಳುಗಳಾದ ಕೀರ್ತನಾ (15), ತನಿಷ್ಕಾ (7), ಯಶವಂತ (21), ರೂಪಾ(37), ಹಂಸಾ (39), ತನುಶ್ರೀ(21), ವಿಕಾಸ್ (13), ಅಖೀಲಾ (23), ರತ್ನಮ್ಮ (47), ಬಾಲಕೃಷ್ಣ (33), ಎಲ್ಲಮ್ಮ (62), ರೂಪಾ (33), ಪ್ರೀತಮ್ (11) ಯಲ್ಲಮ್ಮ, ಪಾವನಾ, ಮಂಜುಳಾ, ಬಿಂದುಶ್ರೀ ಮಿಥುನ್ ರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬೆಂಗಳೂರಿನಿಂದ ಚಾರ್ಮಾಡಿ ಘಾಟ್ ಮಾರ್ಗದ ಮೂಲಕ ಮಂಗಳೂರಿಗೆ ಆಗಮಿಸುತ್ತಿದ್ದ ಮಿನಿ ಬಸ್ ಅಪಘಾತವಾಗಿದೆ. ಈ ಮಿನಿ ಬಸ್ ರಸ್ತೆ ಬಿಟ್ಟು ನದಿ ಬದಿ ಇರುವ ಗುಡ್ಡವನ್ನು ಹತ್ತಿದ್ದು, ಖಾಸಗಿ ವಿದ್ಯುತ್ ಲೈನ್ ಕಂಬಕ್ಕೆ ಬಡಿದಿದೆ. ಹೀಗಾಗಿ ಸಂಭವನೀಯ ಭಾರೀ ಅನಾಹುತ ತಪ್ಪಿದಂತಾಗಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…