ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ವೃದ್ಧೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಚಿನ್ನವನ್ನು ತೊಳೆದು ಕೊಡುವುದಾಗಿ ಅವರ ಎರಡು ಮುಕ್ಕಾಲು ಪವನ್ ಚಿನ್ನದ ಸರವನ್ನು ರಾಸಾಯನಿಕದ ಮೂಲಕ ಕರಗಿಸಿ ಚಿನ್ನವನ್ನು ವಂಚಿಸಿದ ಘಟನೆ ಸಂಭವಿಸಿದೆ.
ಘಟನೆಯ ಕುರಿತು ಪಣಿಲಾಜೆ ನಿವಾಸಿ 90ರ ಹರೆಯದ ರುಕ್ಮಿಣಿ ಶೆಟ್ಟಿಗಾರ್ ಅವರು ದೂರು ನೀಡಿದ್ದು, ಅವರು ಫೆ. 10ರಂದು ಬೆಳಗ್ಗೆ 11.15ರ ಸುಮಾರಿಗೆ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ಚಿನ್ನಾಭರಣ ತೊಳೆದು ಕೊಡುವುದಾಗಿ ಹೇಳಿದ. ಅದನ್ನು ನಂಬಿದ ರುಕ್ಮಿಣಿಯವರು ಕಪಾಟಿನ ಲಾಕರಿನಲ್ಲಿದ್ದ ಲಕ್ಷ್ಮೀ ಪದಕ ಇರುವ ಎರಡು ಮುಕ್ಕಾಲು ಪವನ್ ನ ಚಿನ್ನದ ಸರವನ್ನು ತಂದುಕೊಟ್ಟರು. ಬಳಿಕ ಆತ ಅಂಗಳದಲ್ಲಿದ್ದ ನಳ್ಳಿಯಿಂದ ಮಗ್ ಗೆ ನೀರು ಹಾಕಿ ಬ್ರೆಶ್ ನಿಂದ ಸರವನ್ನು ತೊಳೆಯುವ ನಾಟಕ ಮಾಡಿದ್ದಾನೆ.
ಇದನ್ನೂ ಓದಿ:
ಮುಂದೆ ಪೇಪರ್ ನಲ್ಲಿ ಸುತ್ತಿ ಕೊಟ್ಟಿದ್ದು, ಫ್ಯಾನ್ ಗಾಳಿಗೆ ಇಟ್ಟು ಒಣಗಿಸುವಂತೆ ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಅವರು ಪೇಪರ್ ತೆರೆದು ನೋಡಿದಾಗ ಅರಶಿನ ಪುಡಿಯಂತೆ ಕಾಣುವ ಪುಡಿ ಇದ್ದು, ಚಿನ್ನದ ಸರದ ಸಣ್ಣ ಸಣ್ಣ ತುಂಡುಗಳು, ತಾಮ್ರದ ಬಣ್ಣಕ್ಕೆ ತಿರುಗಿದ ಲಕ್ಷ್ಮೀ ಪದಕ ಕಂಡುಬಂದಿದೆ. ಚಿನ್ನದ ಸರವನ್ನು ವಂಚಿಸಿರುವ ಆರೋಪಿಯ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಪೋಟೊ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…