Featured

ಬೆಳ್ತಂಗಡಿ: ಚಿನ್ನ ಪಾಲೀಶ್ ಮಾಡುವುದಾಗಿ ನಂಬಿಸಿ ವಂಚನೆ ; ಆರೋಪಿ ಬಂಧನ – vishwanews24

ಬೆಳ್ತಂಗಡಿ: ಚಿನ್ನ ಪಾಲೀಶ್ ಮಾಡುವುದಾಗಿ ನಂಬಿಸಿ ವಂಚನೆ ; ಆರೋಪಿ ಬಂಧನ

ಬೆಳ್ತಂಗಡಿ: ಸೇಲ್ಸ್‌ ಮ್ಯಾನ್‌ ರೂಪದಲ್ಲಿ, ಚಿನ್ನದ ಒಡವೆಗಳನ್ನು ತೊಳೆದು ಪಾಲಿಸ್‌ ಮಾಡಿಕೊಡುವುದಾಗಿ ನಂಬಿಸಿ ವಂಚಿಸಿದ ಘಟನೆ ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಎಂಬಲ್ಲಿ ನಡೆದಿದೆ.

ಆರೋಪಿತನಾದ ಬಿಹಾರ ಸುಫೋಲ್‌ ಜಿಲ್ಲೆಯ ನಿವಾಸಿ ಚಂದನ್‌ ಕುಮಾರ್ (30) ಎಂದು ಗುರುತಿಸಲಾಗಿದೆ.

ಫೆಬ್ರವರಿ 10 ರಂದು ಅಪರಿಚಿತ ಸೇಲ್ಸ್‌ ಮ್ಯಾನ್‌ ರೂಪದಲ್ಲಿ, ಚಿನ್ನದ ಒಡವೆಗಳನ್ನು ತೊಳೆದು ಪಾಲಿಸ್‌ ಮಾಡಿಕೊಡುವುದಾಗಿ ನಂಬಿಸಿ, ಚಿನ್ನವನ್ನು ಪಡೆದುಕೊಂಡು ಅದನ್ನು ಯಾವುದೋ ದ್ರಾವಣ ಬಳಸಿ ಕರಗಿಸಿ ವಂಚಿಸಿದ್ದಾನೆ.

ಇದನ್ನೂ ಓದಿ: 👇

ಆರೋಪಿಯ ವಿರುದ್ಧ, ಅ.ಕ್ರ:13/2026, ಕಲಂ 318(4) ಬಿ.ಎನ್.‌ ಎಸ್.‌ 2023 ರಂತೆ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ವೇಣೂರು ಠಾಣಾ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯಿಂದ ಸುಮಾರು ರೂ 75,000-ಮೌಲ್ಯದ 07.೦೦ ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ವೇಣೂರು ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕರಾದ ಅಕ್ಷಯ್‌ ಡವಗಿ, ಓಮನ ಎನ್.‌ ರವರ ನೇತೃತ್ವದಲ್ಲಿ ಎ.ಎಸ್.‌ ಐ. ವೆಂಕಟೇಶ್‌ ನಾಯ್ಕ, ಎ.,ಎಸ್ ಐ ಬೆನ್ನಿಚ್ಚನ್‌, ಹೆಚ್.ಸಿ. 405 ಕೃಷ್ಣ, ಮಹೆಚ್.ಸಿ. 913 ಶ್ರೀಮತಿ ಕೇಶವತಿ, ಪಿ.ಸಿ. 2466 ಬಸವರಾಜ್‌, ಪಿ.ಸಿ. 434 ಮೋಹನ್‌ , ಪಿ.ಸಿ 604, ರಾಕೇಶ್ ರವರ ತಂಡ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: 👇

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago