Featured

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ

ಬೆಳ್ತಂಗಡಿ : ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಜಲಪಾತಕ್ಕೆ ತೆರಳಿದ್ದಾಗ ಕೇರಳದ ಕಾಸರಗೋಡು ಮೂಲದ ಮೂವರು ಯುವಕರು ಲೈಂಗಿಕ ಕಿರುಕುಳ ನೀಡಿದ್ದು ಆರೋಪಿತ ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು ಮೇ 20ರಂದು ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ, ಅವರೊಂದಿಗೆ ಬಂದಿದ್ದ ಮೂವರು ಯುವಕರು ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ವಿದ್ಯಾರ್ಥಿನಿಯರು ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ದಿಡುಪೆ ಭಾಗದ ಕಡಮಗುಂಡಿ ಜಲಪಾತಕ್ಕೆ ಭೇಟಿ ನೀಡಿದ್ದರು. ಜಲಪಾತ ವೀಕ್ಷಣೆಯ ಸಂದರ್ಭದಲ್ಲೇ ಆರೋಪಿಗಳು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಇದಕ್ಕೆ ವಿದ್ಯಾರ್ಥಿನಿಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಘಟನೆ ಗಮನಿಸಿದ ಸ್ಥಳೀಯರು ಹಾಗೂ ಸಾರ್ವಜನಿಕರು ತಕ್ಷಣ ಮಧ್ಯಪ್ರವೇಶಿಸಿ ಆರೋಪಿಗಳನ್ನು ತಡೆದಿದ್ದಾರೆ. ಬಳಿಕ ವಿಷಯವನ್ನು ಪೊಲೀಸರಿಗೆ ತಿಳಿಸಲಾಗಿದ್ದು, ಮಾಹಿತಿ ಪಡೆದ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೂವರನ್ನೂ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Vishwa News 24

Recent Posts

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

2 hours ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

5 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

5 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

6 hours ago

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ -vishwanews24

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…

6 hours ago

ಉಡುಪಿ: ಕೋಡಿ ಬೆಂಗ್ರೆ ಬಳಿ ಬೋಟ್ ಮುಳುಗಡೆ; 6 ಮಂದಿ ಮೀನುಗಾರರ ರಕ್ಷಣೆ -vishwanews24

ಉಡುಪಿ: ಕೋಡಿ ಬೆಂಗ್ರೆ ಬಳಿ ಬೋಟ್ ಮುಳುಗಡೆ; 6 ಮಂದಿ ಮೀನುಗಾರರ ರಕ್ಷಣೆ ಉಡುಪಿ : ಮಲ್ಪೆ ಮೀನುಗಾರಿಕೆ ಬಂದರಿನಿಂದ…

6 hours ago