Featured

ಬೆಳ್ತಂಗಡಿ: ಜಾತಿ-ಧರ್ಮ ನೋಡದೆ ಜನಸೇವಕನಾಗಿ ಕೆಲಸ ಮಾಡಿದ್ದೇನೆ : ಹರೀಶ್ ಪೂಂಜ – Vishwanews24

ಬೆಳ್ತಂಗಡಿ: ಜಾತಿ-ಧರ್ಮ ನೋಡದೆ ಜನಸೇವಕನಾಗಿ ಕೆಲಸ ಮಾಡಿದ್ದೇನೆ : ಹರೀಶ್ ಪೂಂಜ

ಬೆಳ್ತಂಗಡಿ: ‘ಹರೀಶ್ ಪೂಂಜ ಶಾಸಕರಾಗಿ ಕಳೆದ 5 ವರ್ಷಗಳ ಅವಧಿಯಲ್ಲಿ ಬಡವರ ಕಣ್ಣೀರು ಒರೆಸುವ ಜತೆ ಎಲ್ಲಾ ಧರ್ಮದವರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದಾರೆ. ತಾಲ್ಲೂಕಿಗೆ ರೂ. 3500 ಕೋಟಿ ಅನುದಾನ ತಂದು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಈ ಬಾರಿ 50 ಸಾವಿರಕ್ಕಿಂತ ಅಧಿಕ ಮತಗಳಿಂದ ಅವರು ಜಯಶಾಲಿಯಾಗುವುದು ನಿಶ್ಚಿತ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಅವರು ಸೋಮವಾರ ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರವಾಗಿ ನಡೆದ ಚುನಾವಣಾ ಬಹಿರಂಗ ಸಭೆಯಲ್ಲಿ ಮಾತನಾಡಿದರು. ‘ಹರೀಶ್ ಪೂಂಜ ಶಾಸಕರಾದ ಮೇಲೆ ಕಳೆದ 60 ವರ್ಷಗಳಲ್ಲಿ ಆಗದ ಕೆಲಸ ಬೆಳ್ತಂಗಡಿಯಲ್ಲಾಗಿದೆ. ಸುಂದರವಾದ ಪ್ರವಾಸಿ ಬಂಗಲೆ ನಿರ್ಮಾಣವಾಗಿದೆ. ಮುಂದೆ ಮಾದರಿ ಬಸ್ ನಿಲ್ದಾಣ ಹಾಗೂ ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ಚತುಷ್ಪತ ರಸ್ತೆ ನಿರ್ಮಾಣವಾಗಲಿದೆ.

ಈ ಬಾರಿ ಬಿಜೆಪಿ ಸರ್ಕಾರ ಬರಲಿದ್ದು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಡವರಿಗಾಗಿ 10 ಸಾವಿರ ಮನೆಯನ್ನು ನಿರ್ಮಾಣ ಮಾಡುತ್ತೇವೆ’ ಎಂದರು. ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ರಾಜ್ಯದಲ್ಲಿ 120 ಕ್ಕಿಂತ ಅಧಿಕ ಸ್ಥಾನಗಳು ಬಿಜೆಪಿಗೆ ಬರಲಿದ್ದು, ಬಹುಮತದ ಬಿಜೆಪಿ ಸರ್ಕಾರ ಬಂದೇ ಬರುತ್ತದೆ. ಗ್ಯಾರಂಟಿ ಕಾರ್ಡು ಹಂಚುತ್ತಿರುವ ಕಾಂಗ್ರೆಸ್ ಪಕ್ಷಕ್ಕೇ ಗ್ಯಾರಂಟಿ ಇಲ್ಲ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತು ಸೋಮಣ್ಣ ಗೆಲುವು ನಿಶ್ಚಿತ. ಇಂದು ನರೇಂದ್ರ ಮೋದಿಯ ಆಡಳಿತದಿಂದಾಗಿ ಜಗತ್ತು ಭಾರತವನ್ನು ಕೊಂಡಾಡುತ್ತಿದೆ. ಗರೀಬಿ ಹಠಾವೋ, ಕಿಸಾನ್ ಸಮ್ಮಾನ್, ಶೌಚಾಲಯಕ್ಕೆ ಆಧ್ಯತೆ, ಕೋವಿಡ್‍ನಿಂದ ರಕ್ಷಣೆ ಮಾಡಿದ್ದು ನರೇಂದ್ರ ಮೋದಿಯವರು. ದೇಶದ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲೆಡೆ ಬಿಜೆಪಿ ಜಯಗಳಿಸುವ ಅಗತ್ಯವಿದೆ ಎಂದರು.

ಪಕ್ಷದ ಅಭ್ಯರ್ಥಿ, ಶಾಸಕ ಹರೀಶ್ ಪೂಂಜ ಮಾತನಾಡಿ, ‘ತಾಲ್ಲೂಕಿಗೆ ನೆರೆ, ಕೊರೊನಾ ಬಾಧಿಸಿದ ಸಂದರ್ಭದಲ್ಲಿ ಜಾತಿ-ಧರ್ಮ ನೋಡದೆ ಜನಸೇವಕನಾಗಿ ಕೆಲಸ ಮಾಡಿದ್ದೇನೆ. ತಾಲ್ಲೂಕು, ಜಿಲ್ಲೆಯ ಹಿಂದೂ ಬಾಂಧವರು ಕಷ್ಟಕ್ಕೆ ಒಳಗಾದಾಗ ರಾತ್ರಿ ಹಗಲು ಎನ್ನದೆ ಕೆಲಸ ಮಾಡಿದ್ದೇನೆ. ಕೋಮು ಗಲಭೆ, ದೊಂಬಿ ಗಲಾಟೆ ಆಗದಂತೆ ಸಾಮರಸ್ಯದಿಂದ ಐದು ವರ್ಷ ಕೆಲಸ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ, 718 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ, ಉಜಿರೆ ಬೆಳಾಲು ರಸ್ತೆಯ ನಿನ್ನಿಕಲ್ಲು ಬಳಿ 116 ಎಕ್ರೆ ಭೂ ಪ್ರದೇಶವನ್ನು ಕೈಗಾರಿಕಾ ವಲಯವಾಗಿ ಮಾಡಿ ತಾಲ್ಲೂಕಿನ 2500 ಜನರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago