ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅ. 10 ರಂದು ಸಂಭವಿಸಿದೆ.
ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (30) ಮೃತ ದುರ್ದೈವಿ.
ಸುಧೀಶ್ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಲ್ಲಿ ಡಿವೈಡರ್‌ನ ಎರಡು ವಿದ್ಯುದ್ದೀಪಕ್ಕೆ ಹಾನಿಯುಂಟಾಗಿದೆ ಎಂದು ತಿಳಿದು ಬಂದಿದೆ.
ಸುಧೀಶ್ ಅವರು ಪೈಂಟಿಂಗ್ ವೃತ್ತಿ ನಡೆಸುತ್ತಿದ್ದರು. ಸುಧೀಶ್ ಅವರು ತಂದೆ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…