ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ.
ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಫಿಯಾ (6) ಮೃತ ಬಾಲಕಿಯಾಗಿದ್ದಾಳೆ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ನಾಳೆ ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಿಸಿದ್ದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಸಾವನ್ನಪ್ಪಿದೆ ಎನ್ನಲಾಗಿದೆ. ಕೇರ್ಯ ಮಸೀದಿಯಲ್ಲಿ ದಫನ ಅಂತ್ಯ ಸಂಸ್ಕಾರ ನಡೆಯಿತು. ಜಮಾತ್ ಅಧ್ಯಕ್ಷರ ರಶೀದ್ ಕುಂಡಡ್ಕ ಮತ್ತು ಜಮಾತ್ ಶಿಕ್ಷಕರು ಉಪಸ್ಥಿತರಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…