ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪ್ರತಿಭಟನೆ ಆರೋಪ : ಸೌಜನ್ಯ ತಾಯಿ ಸೇರಿದಂತೆ ಹಲವರ ವಿರುದ್ದ ಎಫ್ಐಆರ್ – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪ್ರತಿಭಟನೆ ಆರೋಪ : ಸೌಜನ್ಯ ತಾಯಿ ಸೇರಿದಂತೆ ಹಲವರ ವಿರುದ್ದ ಎಫ್ಐಆರ್

ಮಂಗಳೂರು: ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿ, ಪ್ರಸನ್ನ ರವಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ತಿಮರೋಡಿ ಗಡಿಪಾರು ವಿರುದ್ಧ ಪ್ರತಿಭಟನೆ ಅಂತಾ ಕರೆ ನೀಡಲಾಗಿತ್ತು. ಪೊಲೀಸರಿಂದ ಅನುಮತಿ ಸಿಗದೇ ಇದ್ದರೂ ಜನ ಸೇರುವಂತೆ ಕರೆ ಕೊಡಲಾಗಿತ್ತು. ಇದರಿಂದ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದು ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.

ಸಕಲೇಶಪುರ – ಸುಬ್ರಹ್ಮಣ್ಯ ಕಾಮಗಾರಿ ಹಿನ್ನೆಲೆ : ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿ ವಿಸ್ತರಣೆ  – vishwanews24

Leave a Reply