Featured

ಬೆಳ್ತಂಗಡಿ: ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ ಗೆಳತಿಯರು – Vishwanews24

ಬೆಳ್ತಂಗಡಿ: ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ ಗೆಳತಿಯರು

ನೆಲ್ಯಾಡಿ: ನೆರೆಕರೆಯ ಮನೆಯ ಇಬ್ಬರು ಯುವತಿಯರು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟರೆ, ಅವರ ನೆರೆಯಮನೆಯವರಾದ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಸುರತ್ಕಲ್ ಆಸ್ಪತ್ರೆಯಲ್ಲಿ ಮಧ್ಯಾಹ್ನ ಮೃತಪಟ್ಟರೆನ್ನಲಾಗಿದೆ.

ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾಗಿದ್ದ ಇವರಿಬ್ಬರು ಮೃತಪಟ್ಟಿದ್ದಾರೆ.

ಇವರಿಬ್ಬರು ಸೇವಾ ಪ್ರತಿನಿಧಿಯಾಗಿ ಕೆಲ ಸಮಯಗಳಿಂದ ಕಾರ್ಯವನ್ನು ನಿರ್ವಹಿಸುತ್ತಿದ್ದರು. ಎ.4ರಂದು ಸಂಜೆ ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವೆಂದು ನರಳಾಡಿ ತೀವ್ರ ಅಸ್ವಸ್ಥಗೊಂಡಿದ್ದರು. ಇವರಿಬ್ಬರನ್ನು ಸ್ಥಳೀಯರ ಸಹಕಾರದಲ್ಲಿ ನೆಲ್ಯಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಕ್ಷಿತಾ ಅವರನ್ನು ಅವರ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಲಾವಣ್ಯರನ್ನು ಅವರ ಮನೆಯವರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಯ ವೈದ್ಯರ ಸಲಹೆಯಂತೆ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ಷಿತಾ ಅವರನ್ನು ಅವರ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಲಾವಣ್ಯರನ್ನು ಅವರ ಮನೆಯವರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಯ ವೈದ್ಯರ ಸಲಹೆಯಂತೆ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಕ್ಷಿತಾ ಅವರು ಎ.6 ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಲಾವಣ್ಯ ಇಂದು ಮಧ್ಯಾಹ್ನ ಸುರತ್ಕಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇವರಿಬ್ಬರೂ ಪಟ್ಟೂರಿನಲ್ಲಿ ನೆರೆಕರೆಯವರಾಗಿದ್ದರು.

ಇವರ ಸಾವಿಗೆ ಕಾರಣ ಏನು ಎಂದು ಸ್ಪಷ್ಟಗೊಂಡಿಲ್ಲ. ಈ ಬಗ್ಗೆ ವೈದ್ಯಕೀಯ ವರದಿ ಬಂದ ನಂತರವಷ್ಟೇ ತಿಳಿದು ಬರಬೇಕಾಗಿದೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

11 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

19 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

19 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

19 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

19 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

20 hours ago